ಶೀಘ್ರದಲ್ಲೇ ಪ್ರಧಾನಿ ಭೇಟಿ ಮಾಡಲಿರುವ ಸಿಎಂ ಡಿಕೆಶಿ

Picture of Savistara

Savistara

Bureau Report

ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ರಾಜಕೀಯ ವಾಕ್ಸಮರ ಹಾಗೂ ಜಟಾಪಟಿ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಅತ್ಯಂತ ಸೌಹಾರ್ದಯುತ ಮತ್ತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.ಪ್ರಧಾನಿ ಮೋದಿ ಅವರು ತಮಗೆ ಶುಭ ಹಾರೈಸಿದ್ದು, ಸೌಜನ್ಯದ ದೃಷ್ಟಿಯಿಂದ ತಾವು ಶೀಘ್ರದಲ್ಲೇ ದೆಹಲಿಗೆ ತೆರಳಿ ಅವರನ್ನು ಖುದ್ದಾಗಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಸೂರತ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್‌ ಆಡಳಿತದ ಬಗ್ಗೆ ಜನರಲ್ಲಿ ಅಸಮಾಧಾನವಿರುವ ಕಾರಣಕ್ಕೇ ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಗಿ ಬಂತು ಎಂದು ಮೋದಿ ಟೀಕಿಸಿದ್ದರು. ಆದರೆ, ಈ ಟೀಕೆಗಳ ನಡುವೆಯೂ ಪ್ರಧಾನಿ ಮೋದಿ ಅವರು ತಮಗೆ ಅಭಿನಂದನೆ ಮತ್ತು ಶುಭಹಾರೈಕೆಯ ಸಂದೇಶ ಕಳುಹಿಸಿರುವುದನ್ನು ಮುಖ್ಯಮಂತ್ರಿಗಳು ಬಹಿರಂಗಪಡಿಸಿದ್ದಾರೆ.ತಮಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿರುವ ಡಿ.ಕೆ. ಶಿವಕುಮಾ‌ರ್ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜಕೀಯಕ್ಕಾಗಿ ರಾಜಕೀಯ ಮಾಡದೆ ರಾಜ್ಯದ ಹಿತದೃಷ್ಟಿಯಿಂದ ಜೊತೆಯಾಗಿ ಕೆಲಸ ಮಾಡುವ ಅಗತ್ಯತೆಯನ್ನು ಒತ್ತಿಹೇಳಿದ್ದಾರೆ. ಕೇಂದ್ರದ ಟೀಕೆಗಳಿಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸುವ ಬದಲು ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡಿರುವ ಸಿಎಂ, ಸೌಜನ್ಯದ ದೃಷ್ಟಿಯಿಂದ ಶೀಘ್ರದಲ್ಲೇ ಪ್ರಧಾನಿಗಳನ್ನು ಭೇಟಿ ಮಾಡಲಿದ್ದಾರೆ.

[t4b-ticker]
error: Content is protected !!