ವಾಷಿಂಗ್ಟನ್: ಭಾರತದ ಚುನಾಯಿತ ಪ್ರಧಾನಿಯಾಗಿ ದೀರ್ಘಾಕಾಲ ಸೇವೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಒಡೆತನದ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುಥ್ ಸೋಶಿಯಲ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮೋದಿ ಅವರನ್ನು ಮಹಾನ್ ನಾಯಕ ಎಂದು ಬಣ್ಣಿಸಿದ್ದಾರೆ.’ಭಾರತದ ಚುನಾಯಿತ ಪ್ರಧಾನಿಯಾಗಿ ದೀರ್ಘಾ ಕಾಲ ಸೇವೆ ಸಲ್ಲಿಸಿರುವ ನನ್ನ ಸ್ನೇಹಿತ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ನಿಜಕ್ಕೂ ಅವರೊಬ್ಬ ಒಬ್ಬ ಮಹಾನ್ ನಾಯಕ’ ಎಂದು ಟ್ರಂಪ್ ಹೇಳಿದ್ದಾರೆ.ಮುಂದುವರಿದು, ‘ಆರೋಗ್ಯವಂತ, ಬುದ್ಧಿವಂತ ವ್ಯಕ್ತಿಯಾಗಿರುವ ಮೋದಿ ಅವರು ಮುಂದಿನ ವರ್ಷಗಳಲ್ಲಿ ಮತ್ತಷ್ಟು ಯಶಸ್ಸು ಕಾಣುವಂತಾಗಲಿ’ ಎಂದು ಹಾರೈಸಿದ್ದಾರೆ.
ಶುಭ ಹಾರೈಸಿದ ಟ್ರಂಪ್ ಅವರಿಗೆ ಧನ್ಯವಾದ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ-ಅಮೆರಿಕ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ (ಟ್ರಂಪ್) ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.ಟ್ರಂಪ್ ಮಾತ್ರವಲ್ಲದೆ, ವಿಶ್ವದ ಇತರ ಹಲವು ನಾಯಕರು ಪ್ರಧಾನಿ ಮೋದಿ ಅವರಿಗೆ ತಮ್ಮ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಪ್ರಧಾನಿ ಮೋದಿ ಅವರು ನಿನ್ನೆಗೆ (ಜೂ.10 ಬುಧವಾರ) 4,399 ದಿನಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸುದೀರ್ಘಾವಧಿಯ (4,398 ದಿನಗಳು) ದಾಖಲೆಯನ್ನು ಅವರು ಮುರಿದಿದ್ದಾರೆ.












































