‘ಭಾರತ್‌ ಭಾಗ್ಯ ವಿಧಾತ’ ಚಿತ್ರದಲ್ಲಿ ದಾದಿಯರ ಸಾಹಸ ಅನಾವರಣ: ನಿತಿನ್ ಗಡ್ಕರಿ

Picture of Savistara

Savistara

Bureau Report

ನಾಗುರ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ಕಾಮಾ ಆಸ್ಪತ್ರೆಯ ದಾದಿಯರು ಹೇಗೆ ಪ್ರಾಣದ ಹಂಗು ತೊರೆದು ಜನರ ಜೀವ ಉಳಿಸಿದರು ಎಂಬುವುದನ್ನು ‘ಭಾರತ್‌ ಭಾಗ್ಯ ವಿಧಾತ’ ಸಿನಿಮಾದಲ್ಲಿ ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶ್ಲಾಘಿಸಿದ್ದಾರೆ.

ನಾಗಪುರದಲ್ಲಿ ನಡೆದ ಈ ಚಿತ್ರದ ವಿಶೇಷ ಪ್ರದರ್ಶನ ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಈ ಸಿನಿಮಾ ನನ್ನ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿತು. ಭಯೋತ್ಪಾದಕರು ದಾಳಿ ಮಾಡಿದಾಗ ನಾನು ಮುಂಬೈನಲ್ಲಿಯೇ ಇದ್ದೆ. ಉಗ್ರರು ವಿಟಿ (CSMT) ರೈಲ್ವೆ ನಿಲ್ದಾಣದ ಮೇಲೆ ದಾಳಿ ಮಾಡಿದ ನಂತರ ಕಾಮಾ ಆಸ್ಪತ್ರೆಗೂ ನುಗ್ಗಿದ್ದರು. ಆ ಸಮಯದಲ್ಲಿ ಅಲ್ಲಿನ ದಾದಿಯರು ತೋರಿದ ಧೈರ್ಯ ಮತ್ತು ಜನರ ಜೀವ ಉಳಿಸಿದ ರೀತಿ ಅತ್ಯಂತ ನೈಜವಾಗಿ ಈ ಚಿತ್ರದಲ್ಲಿ ಮೂಡಿಬಂದಿದೆ ಎಂದಿದ್ದಾರೆ.ಮನೋಜ್ ಕಪ್ಪೆ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಚಿತ್ರದಲ್ಲಿ ನಟಿಸಿರುವ ಬಹುತೇಕ ಕಲಾವಿದರು ಮರಾಠಿ ಮೂಲದವರಾಗಿದ್ದು, ಪ್ರತಿಯೊಬ್ಬರೂ ಅದ್ಭುತವಾಗಿ ಅಭಿನಯಿಸಿದ್ದಾರೆ ಎಂದು ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!