ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಗ್ಲೋವಾಕಿಯಾ ದೇಶಗಳ ಪ್ರವಾಸಕ್ಕೆ ಶನಿವಾರ ತೆರಳಿದ್ದಾರೆ. ಈ ಅವಧಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಹಲವು ಜಾಗತಿಕ ಹಾಗೂ ದ್ವಿಪಕ್ಷೀಯ ವಿಚಾರಗಳ ಕುರಿತು ವಿಶ್ವ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಜಿ7 ಶೃಂಗಸಭೆಯಲ್ಲಿ ಭಾರತದ ಧ್ವನಿ
ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾರತದ ಪಾಲ್ಗೊಳ್ಳುವಿಕೆ ದೇಶದ ಹೆಚ್ಚುತ್ತಿರುವ ಜಾಗತಿಕ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಭಾರತ-ಫ್ರಾನ್ಸ್ ಸಂಬಂಧಗಳು ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ಹಂತ ತಲುಪಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.
ಸ್ಲೋವಾಕಿಯಾಗೆ ಐತಿಹಾಸಿಕ ಭೇಟಿ
ಪ್ರವಾಸದ ಭಾಗವಾಗಿ ಪ್ರಧಾನಿ ಮೋದಿ ಶ್ಲೋವಾಕಿಯಾಕ್ಕೂ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಪಡೆದ ಬಳಿಕ ಭಾರತೀಯ ಪ್ರಧಾನಿಯೊಬ್ಬರು ಆ ದೇಶಕ್ಕೆ ತೆರಳುತ್ತಿರುವುದು ಇದೇ ಮೊದಲ ಬಾರಿ. ಅಲ್ಲಿನ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ ಹಾಗೂ ಪ್ರಧಾನಿ ರಾಬರ್ಟ್ ಫಿಕೊ ಅವರೊಂದಿಗೆ ಮಹತ್ವದ ಮಾತುಕತೆಗಳು ನಡೆಯಲಿವೆ.ಮಧ್ಯ ಯುರೋಪಿನಲ್ಲಿ ಭಾರತದ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಆರ್ಥಿಕ, ಕಾರ್ಯತಂತ್ರ ಹಾಗೂ ರಾಜತಾಂತ್ರಿಕ ಸಹಕಾರ ವಿಸ್ತರಣೆಗೆ ಈ ಪ್ರವಾಸ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.











































