ಕಚೇರಿ ಹಾಜರಾತಿಗೆ ಡಿಜಿಟಲ್ ನಿಗಾ; ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

Picture of Savistara

Savistara

Bureau Report

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ರಾಜ್ಯದ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿರುವ ಅವರು, ಕಚೇರಿ ಹಾಜರಾತಿ ಹಾಗೂ ಜನಸೇವೆಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶಿಸಿದ್ದಾರೆ.ಸೂಚನೆಗಳ ಪ್ರಕಾರ, ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿ ಹಾಜರಿರಬೇಕು. ಕಚೇರಿಗೆ ಬಂದ ತಕ್ಷಣ ತಮ್ಮ ಹಾಜರಾತಿಯನ್ನು ದೃಢೀಕರಿಸಲು ಮೊಬೈಲ್ ಸಂದೇಶದ ಮೂಲಕ ಮೇಲಧಿಕಾರಿಗಳಿಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ತಿಳಿಸಿದ್ದಾರೆ. ಸರ್ಕಾರದ ಮೇಲೆ ಜನರು ಅಪಾರ ನಂಬಿಕೆ ಇಟ್ಟಿದ್ದು, ವಿವಿಧ ಕೆಲಸಗಳಿಗಾಗಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸುವುದು ಅಥವಾ ಅವರ ಅರ್ಜಿಗಳಿಗೆ ಸ್ಪಂದಿಸದೆ ವಿಳಂಬ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ಮೂಲಕ ಆಡಳಿತದ ಮೇಲಿನ ಜನರ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಕಚೇರಿ ಹಾಜರಾತಿ ಮತ್ತು ಕಾರ್ಯನಿರ್ವಹಣೆಯ ಮೇಲೆ ನಿಗಾ ವಹಿಸಲು ಡಿಜಿಟಲ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ತಿಳಿದುಬಂದಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!