ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾ‌ರ್

Picture of Savistara

Savistara

Bureau Report

ಬೆಂಗಳೂರು: ‘ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಬ್ಯಾಂಕ್ ಖಾತೆ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಖಾತೆ ಸಂಖ್ಯೆ ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಹೇಳಿದ್ದೇವೆ. ಅದರ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.’ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ’ ಎಂದೂ ಅವರು ಹೇಳಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!