‘ಕರ್ತವ್ಯ’ ಅಪ್ಲಿಕೇಷನ್‍ನಲ್ಲಿ ನೋಂದಾಯಿಸದ 2.13 ಲಕ್ಷ ಸರಕಾರಿ ನೌಕರರು : ಡಾ.ಶಾಲಿನಿ ರಜನೀಶ್

Picture of Savistara

Savistara

Bureau Report

ಬೆಂ ಗಳೂರು : ರಾಜ್ಯದಲ್ಲಿ ಇದುವರೆಗೂ 2,13,925 ಸರಕಾರಿ ಅಧಿಕಾರಿ, ನೌಕರರು ‘ಕರ್ತವ್ಯ’ ಮೊಬೈಲ್ ಅಪ್ಲಿಕೇಷನ್‍ನಲ್ಲಿ ನೋಂದಾಯಿಸಿಕೊಂಡಿಲ್ಲ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಬುಧವಾರ ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಟಿಪ್ಪಣಿ ನೀಡಿರುವ ಅವರು, ಮುಖ್ಯಮಂತ್ರಿ ಜೂ.4ರಂದು ನಡೆಸಿದ ಎಲ್ಲ ಕಾರ್ಯದರ್ಶಿಗಳ ಸಭೆಯಲ್ಲಿ ಎಲ್ಲ ಸರಕಾರಿ ಅಧಿಕಾರಿ, ನೌಕರರು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಅದರಂತೆ, ಎಲ್ಲ ಅಧಿಕಾರಿ, ನೌಕರರು ಕರ್ತವ್ಯ ಮೊಬೈಲ್ ಅಪ್ಲಿಕೇಷನ್‍ನಲ್ಲಿ ನೋಂದಣಿ ಮಾಡಿಕೊಂಡು ಪ್ರತಿದಿನ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕಿದೆ. ಜೂ.16ರ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಇದುವರೆಗೂ 2,13,925 ಅಧಿಕಾರಿ, ನೌಕರರು ಕರ್ತವ್ಯ ಮೊಬೈಲ್ ಅಪ್ಲಿಕೇಷನ್‍ನಲ್ಲಿ ನೋಂದಾಯಿಸಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಆದುದರಿಂದ, ಈ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಿ, ತಮ್ಮ ಜಿಲ್ಲೆಯಲ್ಲಿ ಇದುವರೆಗೂ ಕರ್ತವ್ಯ ಮೊಬೈಲ್ ಅಪ್ಲಿಕೇಷನ್‍ನಲ್ಲಿ ನೋಂದಾಯಿಸದ ಅಧಿಕಾರಿ, ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವಂತೆ ಹಾಗೂ ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು 7 ದಿನಗಳೊಳಗಾಗಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

[t4b-ticker]
error: Content is protected !!