ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ ತಿರುಗೇಟು

Picture of Savistara

Savistara

Bureau Report

ಅಯೋಧ್ಯೆ, ಜೂನ್ 19: ಅಯೋಧ್ಯೆಯ (Ayodhya) ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಭೂಮಿ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಮಾಡಿದ್ದ ಆರೋಪಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿರುಗೇಟು ನೀಡಿದ್ದಾರೆ. ತಮ್ಮ ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡದ ಮತ್ತು ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ನಾಯಕರು ಇಂದು ರಾಜಕೀಯ ಲಾಭಕ್ಕಾಗಿ ‘ರಾಮಭಕ್ತಿ’ಯ ನಾಟಕವಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ ಭಕ್ತರ ಬಗ್ಗೆ ಕಾಳಜಿ ವಹಿಸುತ್ತಿರುವಂತೆ ನಟಿಸುತ್ತಿದ್ದಾರೆ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೆಲವು ನಾಯಕರು ತಮ್ಮ ಇಡೀ ಜೀವನದಲ್ಲಿ ಎಂದಿಗೂ ಅಯೋಧ್ಯೆಗೆ ಹೆಜ್ಜೆ ಇಟ್ಟವರಲ್ಲ. ಅಯೋಧ್ಯೆಯ ಹೆಸರೆತ್ತಲು ಹೆದರುತ್ತಿದ್ದವರು ಮತ್ತು ಶ್ರೀರಾಮ ಕೇವಲ ಒಂದು ಕಾಲ್ಪನಿಕ ಪಾತ್ರ ಎಂದು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದವರು ಇಂದು ರಾಮಮಂದಿರದ ನಿಧಿಯ ಬಗ್ಗೆ ಮಾತನಾಡುತ್ತಿದ್ದಾರೆ.” ಎಂದು ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!