ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಎಸ್ ಆರ್ ಕೆ ಲ್ಯಾಡರ್ಸ್ ಮಾಲಕ ಕೇಶವ ಅಮೈ ಅಯ್ಕೆ -ಗಣ್ಯರಿಂದ ಅಭಿನಂದನೆ

Picture of Savistara

Savistara

Bureau Report

ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ನೀಡುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಜಿಲ್ಲೆಯ ಉದ್ಯಮಿ ಹಾಗೂ ಕೃಷಿ ಕ್ಷೇತ್ರದ ಸಂಶೋಧಕರಾದ ಪುತ್ತೂರಿನ ಎಸ್.ಆರ್.ಕೆ. ಲ್ಯಾಡರ್ ಸಂಸ್ಥೆಯ ಮೂಲಕ ನೂರಾರು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿರುವ ವ್ಯವಸ್ಥಾಪಕ ನಿರ್ದೇಶಕ ಕೇಶವ ಅಮೈ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂ.27 ರಂದು ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಂಶೋಧನಾತ್ಮಕ ಕೃಷಿ ಸಂಬಂಧಿತ ಯಂತ್ರೋಪಕರಣಗಳನ್ನು ಸೃಷ್ಟಿಸಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೇಶವ ಅಮೈ ಯವರನ್ನು ಪ್ರತಿಷ್ಠಾನದ ಪ್ರಮುಖರು ಹ ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ, ಬೆಳ್ಳಾರೆ ಸಿಎ ಬ್ಯಾಂಕ್ ಅಧ್ಯಕ್ಷ ಆರ್.ಕೆ. ಭಟ್ ಕುರುಂಬುಡೇಲು, ಸುಳ್ಯ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಅವಿನಾಶ್‌ ಕುರುಂಜಿ, ಬಿಜೆಪಿ ಬೆಳ್ಳಾರೆ ಶಕ್ತಿ ಕೇಂದ್ರದ ಅನೂಪ್ ಬಿಳಿಮಲೆ, ದಿನೇಶ್ ಪಂಜಿಗ, ಕೇಶವ ಅಮೈ ಅವರ ತಾಯಿ ರಾಮಕ್ಕ, ಪತ್ನಿ ಮಾಲತಿ, ಪುತ್ರ ಗಗನ್ ಉಪಸ್ಥಿತರಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!