ಸೈನಿಕರ ಕಲ್ಯಾಣ ನಿಧಿಗೆ ₹ 10 ಲಕ್ಷ ದೇಣಿಗೆ: ದಯಾಮರಣ ಹೋರಾಟಗಾರ್ತಿಯ ಮಾದರಿ ಕಾರ್ಯ

Picture of Savistara

Savistara

Bureau Report

ದಾವಣಗೆರೆ: ದಯಾಮರಣ ಹೋರಾಟಗಾರ್ತಿ, ನಿವೃತ್ತ ಶಿಕ್ಷಕಿ ಎಚ್‌.ಬಿ. ಕರಿಬಸಮ್ಮ ಅವರು ಸೈನಿಕರ ಕಲ್ಯಾಣ ನಿಧಿಗೆ ₹ 10 ಲಕ್ಷ ದೇಣಿಗೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರನ್ನು ಸೋಮವಾರ ಭೇಟಿಯಾಗಿ ತಮ್ಮ ಸ್ವಂತ ಮನೆ ಮಾರಾಟದಿಂದ ಹಾಗೂ ಪಿಂಚಣಿಯಿಂದ ಬಂದಿದ್ದ * 10 ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು.’ನಿರಂತರ ಹೋರಾಟಗಳ ಪರಿಣಾಮ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿದ್ದೇನೆ. ದೇಶದ ಸೈನಿಕರಿಗೆ ಸಹಾಯ ಮಾಡಬೇಕೆಂಬ ತುಡಿತ ಇತ್ತು. ಅನಾರೋಗ್ಯದ ಕಾರಣ ಆದಷ್ಟು ಬೇಗ ಹಣವನ್ನು ದೇಶಕ್ಕೆ ಸಮರ್ಪಿಸಿ ಋಣಮುಕ್ತಳಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಕರಿಬಸಮ್ಮ ಹೇಳಿದರು.’ಕೇಂದ್ರ ಸರ್ಕಾರದ ಅಧಿಕೃತ ನಿಧಿಯಾದ ‘ಭಾರತ್ ಕೆ ವೀರ್’ಗೆ ದೇಣಿಗೆಯ ಮೊತ್ತ ವರ್ಗಾಯಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

86 ವರ್ಷದ ಕರಿಬಸಮ್ಮ ಸದ್ಯ ವೃದ್ಧಾಶ್ರಮವೊಂದರಲ್ಲಿ ನೆಲೆಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!