ಬಿಡದಿ ವಿಚಾರ ಚರ್ಚಿಸೋಣ ಬನ್ನಿ: ಸಮಯ ನಿಗದಿ ಮಾಡಿ HDKಗೆ ಆಹ್ವಾನ ನೀಡಿದ ಡಿಕೆಶಿ

Picture of Savistara

Savistara

Bureau Report

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿಚರ್ಚಿಸೋಣ ಬನ್ನಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಆಹ್ವಾನ ನೀಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಸಿಎಂ, ‘ಕುಮಾರಸ್ವಾಮಿಯವರೇ, ತಾವು ಪ್ರಾರಂಭಿಸಿದ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ಉತ್ಸುಕನಾಗಿದ್ದೇನೆ. ತಾವು ಮತ್ತು ತಮ್ಮ ತಂಡದ ಐವರು ಪ್ರತಿನಿಧಿಗಳೊಂದಿಗೆ 2026ರ ಜೂನ್ 26ರಂದು ಬೆಳಿಗ್ಗೆ 11ಕ್ಕೆ ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಆಗಮಿಸುವಂತೆ ಕೋರುತ್ತೇನೆ’ ಎಂದು ತಿಳಿಸಿದ್ದಾರೆ.ಡಿಕೆಶಿ ಅವರು ಮುಖ್ಯಮಂತ್ರಿಯಾಗುವ ಮೊದಲೂ ಈ ಬಗ್ಗೆ ಮಾತನಾಡಿದ್ದರು.’ಬಿಡದಿ ಟೌನ್‌ಶಿಪ್‌ ವಿಚಾರದ ಚರ್ಚೆಗೆ ಸಿದ್ದನಿದ್ದೇನೆ. ಅವರಿಗೆ ಬಿಡುವಿಲ್ಲ ರೇಟ್ ಫಿಕ್ಸ್, ವಸೂಲಿ ಫಿಕ್ಸ್ ಮಾಡುತ್ತಿದ್ದಾರೆ. ಬಿಡುವು ಮಾಡಿಕೊಂಡು ಚರ್ಚೆಗೆ ಬರಲಿ’ ಎಂದು ಎಚ್‌ಡಿಕೆ ಮೇ ತಿಂಗಳಲ್ಲಿ ಹೇಳಿದ್ದರು. ಅದರೆ ಬೆನ್ನಲ್ಲೇ ತಿರುಗೇಟು ನೀಡಿದ್ದ ಡಿಕೆಶಿ, ‘ಬಿಡದಿ ಟೌನ್‌ಶಿಪ್ ವಿಚಾರವಾಗಿ ಕುಮಾರಸ್ವಾಮಿಯ ಪಂಥಾಹ್ವಾನ ಸ್ವೀಕರಿಸಲು ಸಿದ್ಧವಾಗಿದ್ದೇನೆ. ಜಾಗ ಮತ್ತು ಸಮಯವನ್ನು ಅವರೇ ನಿರ್ಧರಿಸಲಿ’ ಎಂದು ಸವಾಲು ಹಾಕಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!