ಕುಡ್ಲದ ಜನಕ್ಲೆ ಒಂಜಿ ಅವಕಾಶ ಪೊಲೀಸ್ ಕೆಲಸಗ್ ಸೇರ್ಲೆ | ತುಳು ಗೊತ್ತುಂಡ ಅವ್ ನಿಗ್ಲೆಗ್ ಪ್ಲಸ್ |ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿಶೇಷ ಮನವಿ

Picture of Savistara

Savistara

Bureau Report

“ಎನ್ನ ವೃತ್ತಿ ಜೀವನಡ್ ಕುಡ್ಲ ಎನ್ನ ಇಷ್ಟವಿದೆ. ಎನ್ನ ಸೇವಾವಧಿಡ್ ಎಚ್ಚ ಸರ್ವಿಸ್ ಮಲ್ತಿನಲು ಉಂಡುವೇ. ಕುಡ್ಡದ ಜನಕುಲು ಮಸ್ತ್ ಎಡ್ಡೆಂತಿನಕುಲು, ಬೊಕ್ಕ ಮಸ್ತ್ ಬುದ್ಧಿವಂತೆರ್ ಪೊಲೀಸ್ ಇಲಾಖೆಡ್ ಕರ್ತವ್ಯ ಮುಲ್ಪುನ ಗೌರವದ ಕೆಲಸ. ಕುಡ್ಲದಕುಲು ಪೊಲೀಸ್, ಡಿಪಾರ್ಟ್ಮೆಂಟ್, ಸೇರ್ಲೆ, ಅವು ಬೊಕ್ಕಲಾತ್ ಇಲಾಖೆಗ್ ಶಕ್ತಿ ಆಪುಂಡು.”

ಮಂಗಳೂರಿನ ಬಗ್ಗೆ ಹಾಗೂ ಇಲ್ಲಿನ ಜನರ ಬಗ್ಗೆ ಮೆಚ್ಚುಗೆಯ ಮಾತುಗಳೊಂದಿಗೆ ನಗರ ಪೊಲೀಸ್‌ ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ ಅವರು ಯುವ ಸಮುದಾಯ ಪೊಲೀಸ್‌ ಇಲಾಖೆಗೆ ಸೇರ್ಪಡೆಯಾಗುವಂತೆ ವಿಜಯ ಕರ್ನಾಟಕ ಮೂಲಕ ಮನವಿ ಮಾಡಿದ್ದಾರೆ.

ಮಂಗಳೂರು ರಾಜ್ಯದ ಅತಿವೇಗವಾಗಿ ಬೆಳೆಯುತ್ತಿರುವ ಪ್ರತಿಷ್ಠಿತ ನಗರಗಳಲ್ಲಿ ಒಂದಾಗಿದ್ದು, ವೈದ್ಯಕೀಯ, ಶೈಕ್ಷಣಿಕ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದ ಐದು ಕಮಿಷನರೇಟ್‌ಗಳಲ್ಲಿ ಮಂಗಳೂರು ಕೂಡ ಒಂದಾಗಿದ್ದು, 500ಕ್ಕೂ ಅಧಿಕ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೇ ವೇಳೆ ರಾಜ್ಯಾದ್ಯಂತ ಖಾಲಿ ಇರುವ 3395 ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 195 ಹುದ್ದೆಗಳು ಮಂಜೂರಾಗಿವೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ರಾಜ್ಯದ ಇತರೆ ಜಿಲ್ಲೆಗಳಿಗಿಂತ ಭಿನ್ನವಾಗಿವೆ. ಭಾಷೆ, ಸಂಸ್ಕೃತಿ, ಆಹಾರ ಪದ್ಧತಿ ಮತ್ತು ಆಚರಣೆಗಳಲ್ಲಿ ವಿಶಿಷ್ಟತೆ ಇದೆ. ಇಲ್ಲಿನ ಜನರು ಸುಶಿಕ್ಷಿತರಾಗಿದ್ದು, ಕಾನೂನು ಮತ್ತು ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಉತ್ತಮ ಅರಿವು ಹೊಂದಿದ್ದಾರೆ. ಹೀಗಾಗಿ ಸ್ಥಳೀಯ ಯುವಕರು ಪೊಲೀಸ್‌ ಇಲಾಖೆಗೆ ಸೇರ್ಪಡೆಯಾದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ನೆರವಾಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

195 ಹುದ್ದೆಗಳ ವಿವರ:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ 125 ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ 70 ಹುದ್ದೆಗಳು ಮಂಜೂರಾಗಿವೆ.

ಕಮಿಷನರೇಟ್ ವ್ಯಾಪ್ತಿ:ಪುರುಷರು – 83ಮಹಿಳೆಯರು- 28ಸೇವಾನಿರತ ಪೊಲೀಸ್ ಕಾನ್‌ಸ್ಟೇಬಲ್ (ಪುರುಷ) – 10ಸೇವಾನಿರತ ಪೊಲೀಸ್‌ ಕಾನ್‌ಸ್ಟೇಬಲ್‌ (ಮಹಿಳೆ) – 3ತೃತೀಯ ಲಿಂಗಿ – 1ಜಿಲ್ಲಾ

ಪೊಲೀಸ್‌ ವ್ಯಾಪ್ತಿ:ಪುರುಷರು – 46ಮಹಿಳೆಯರು – 16ಸೇವಾನಿರತ ಪೊಲೀಸ್ ಕಾನ್‌ಸ್ಟೇಬಲ್ (ಪುರುಷ) – 5ಸೇವಾನಿರತ ಪೊಲೀಸ್ ಕಾನ್‌ಸ್ಟೇಬಲ್ಫ್ (ಮಹಿಳೆ) – 2ತೃತೀಯ ಲಿಂಗಿ – 152

ಈ ಹುದ್ದೆಗಳಲ್ಲಿ ಗ್ರಾಮೀಣ ಅಭ್ಯರ್ಥಿಗಳು, ಮಾಜಿ ಸೈನಿಕರು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು, ಯೋಜನೆಗಳಿಂದ ನಿರ್ವಸಿತರು ಹಾಗೂ ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!