ರಜನಿಕಾಂತ್ ಹೊಸ ಸಿನಿಮಾದ ಟೈಟಲ್ ರೀವಿಲ್: ವಿಭಿನ್ನ ಲುಕ್‌ನಲ್ಲಿ ‘ಧರ್ಮನ್’

Picture of Savistara

Savistara

Bureau Report

ರಜನಿಕಾಂತ್ ಅಭಿನಯದ ‘ತಲೈವರ್ 173’ ಸಿನಿಮಾದ ಟೈಟಲ್ ರೀವಿಲ್ ಮಾಡಲಾಗಿದ್ದು, ಈ ಚಿತ್ರಕ್ಕೆ ಧರ್ಮನ್ ಎಂದು ಹೆಸರಿಡಲಾಗಿದೆ.

ಈ ಸಂಬಂಧ ಚಿತ್ರತಂಡ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದೆ.ಈ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಗಳಿದ್ದವು. ಇದೀಗ ಟೈಟಲ್ ರೀವಿಲ್ ಜತೆಗೆ ಪೋಸ್ಟರ್‌ನಲ್ಲಿರುವ ರಜನಿಕಾಂತ್ ಅವಾತಾರ ಅವರ ಅಭಿಮಾನಿಗಳಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಪೋಸ್ಟರ್‌ನಲ್ಲಿ ರಜನಿಕಾಂತ್ ಅವರು ನೀಲಿ ಬಣ್ಣದ ಡಾಕ್ಟರ್ ಉಡುಪು ಧರಿಸಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಕೈಯಲ್ಲಿ ರಕ್ತಸಿಕ್ತ ಸರ್ಜಿಕಲ್ ಕತ್ತಿ ಹಿಡಿದು ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವನ್ನು ಕಮಲ್ ಹಾಸನ್ ಅವರ ರಾಜ್ ಫಿಲ್ಡ್ ಇಂಟರ್‌ನ್ಯಾಷನಲ್ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ. ಈ ಚಿತ್ರಕ್ಕೆ ಅಶ್ವತ್‌ ಮಾರಿಮುತ್ತು ನಿರ್ದೇಶನವಿದ್ದರೆ, ಅನಿರುದ್ ರವಿಚಂದರ್‌ ಅವರ ಸಂಗೀತ ಸಂಯೋಜನೆ ಇದೆ.

ಜೈಲರ್-2 ಚಿತ್ರೀಕರಣ ಪೂರ್ಣಗೊಂಡ ಬಳಿಕ ಧರ್ಮನ್ ಚಿತ್ರದ ಕೆಲಸದಲ್ಲಿ ರಜನಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!