ಟೋಕಿಯೊ: ಉತ್ತರ ಜಪಾನ್‌ನ ಕರಾವಳಿ ಪ್ರದೇಶದಲ್ಲಿಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿಯಿಲ್ಲ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.
ಇವಾಟೆಯ ಪೂರ್ವ ಕರಾವಳಿಯಲ್ಲಿ ಸುಮಾರು 50 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.ಈ ಪ್ರದೇಶದಲ್ಲಿ ಪದೇ ಪದೇ ಭೂಕಂಪಗಳು ಸಂಭವಿಸುತ್ತಿವೆ. ಆದರೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.ಈ ಕುರಿತು ಟೋಕಿಯೊದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಜಪಾನ್ ಪ್ರಧಾನಿ ಸನೆ ತಕೈಚಿ, ಅಗತ್ಯ ಪರಿಹಾರ ಕಾರ್ಯಗಳಿಗೆ ಸಿದ್ಧತೆ ನಡೆಸಲಾಗುತ್ತಿದೆ. ಭೂಕಂಪಪೀಡಿತ ಪ್ರದೇಶದ ಜನರು ಜಾಗರೂಕರಾಗಿರುವಂತೆಯೂ ಸಲಹೆ ನೀಡಿದ್ದಾರೆ.
ಜಪಾನ್‌ನ ಪರಮಾಣು ಹಾಗೂ ಇಂಧನ ಸ್ಥಾವರಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.’ಪೆಸಿಫಿಕ್ ರಿಂಗ್ ಆಫ್ ಫೈರ್’ ಎಂದು ಕರೆಯಲ್ಪಡುವ ಭೂಕಂಪಪೀಡಿತ ಪ್ರದೇಶದಲ್ಲಿ ಜಪಾನ್ ನೆಲೆಗೊಂಡಿದ್ದು, ಪದೇ ಪದೇ ಭೂಕಂಪಗಳು ವರದಿಯಾಗುತ್ತಿವೆ.
ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಅತ್ತ ವೆನೆಜುವೆಲಾದ ಕರಾವಳಿ ಭಾಗದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಎರಡು ಪ್ರಬಲ ಭೂಕಂಪ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.










































