RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ ಎತ್ತಿದಾಗ ಕರಾವಳಿ ಬಿಜೆಪಿ ಶಾಸಕರ ಮೌನ: ಸತ್ಯಜಿತ್ ಸುರತ್ಕಲ್ ಆಕ್ರೋಶ

Picture of Savistara

Savistara

Bureau Report

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೂರು ವರ್ಷಗಳ ಇತಿಹಾಸ ಹೊಂದಿರುವ ಸಂಘಟನೆ. ಸಂಘದ ಬಗ್ಗೆ ಪ್ರಶ್ನೆ ಕೇಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಘದ ಹಿಂದುತ್ವದ ವಿಚಾರಧಾರೆ, ನೋಂದಣಿ ಹಾಗೂ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ, ಸಂಘದ ಕಾರ್ಯಚಟುವಟಿಕೆಗಳ ಪ್ರಮುಖ ಕೇಂದ್ರವೆಂದು ಪರಿಗಣಿಸಲ್ಪಡುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮೌನ ವಹಿಸಿರುವುದು ಆಶ್ಚರ್ಯಕರ ಎಂದು ಸತ್ಯಜಿತ್ ಸುರತ್ಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗಳಿಗೆ ಸಂಘವು ಕಾನೂನುಬದ್ಧವಾಗಿ ಉತ್ತರ ನೀಡುವ ಸಾಮರ್ಥ್ಯ ಹೊಂದಿದೆ. ಹಲವು ದಶಕಗಳಿಂದ ಸಂಘದ ಕಾರ್ಯಕರ್ತರ ಪರಿಶ್ರಮ ಮತ್ತು ಹಿಂದುತ್ವದ ವಿಚಾರಧಾರೆಯ ಪರಿಣಾಮವಾಗಿ ಈ ಭಾಗದಲ್ಲಿ ರಾಜಕೀಯ ಯಶಸ್ಸು ಸಾಧ್ಯವಾಗಿದೆ. ಹಾಗಿದ್ದರೂ ಕರಾವಳಿಯ ಜನಪ್ರತಿನಿಧಿಗಳು ಯಾಕೆ ಮೌನವಾಗಿದ್ದಾರೆ?” ಎಂದು ಅವರು ಪ್ರಶ್ನಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!