ಖುಷಿ ನೀಡಿದ ಕೇಂದ್ರ ಸರ್ಕಾರದ ದಿಢೀರ್ ನಿರ್ಧಾರ : LPG ಸಿಲಿಂಡರ್‌ಗಳ ಪೂರೈಕೆ ಮಿತಿ ನಿರ್ಬಂಧ ತೆರವು

Picture of Savistara

Savistara

Bureau Report

ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಪೂರೈಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.

ಇದರಿಂದ ಕಳೆದ ಕೆಲವು ವಾರಗಳಿಂದ ಸಿಲಿಂಡ‌ರ್ ಕೊರತೆಯ ಆತಂಕದಲ್ಲಿದ್ದ ಹೋಟೆಲ್, ರೆಸ್ಟೋರೆಂಟ್, ಧಾಬಾ, ಕ್ಯಾಂಟೀನ್‌ ಹಾಗೂ ಸಣ್ಣ ಉದ್ಯಮಗಳಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಬಿಕ್ಕಟ್ಟಿನ ಸಮಯದಲ್ಲಿ ಗೃಹ ಬಳಕೆದಾರರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ವಾಣಿಜ್ಯ LPG ವಿತರಣೆಗೆ ಮಿತಿ ಹೇರಿತ್ತು. ಆದರೆ ಅಂತರರಾಷ್ಟ್ರೀಯ ಪರಿಸ್ಥಿತಿ ಸುಧಾರಿಸಿರುವುದು ಮತ್ತು ಪೂರೈಕೆ ಸರಪಳಿ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಇದರಿಂದ ವಾಣಿಜ್ಯ ಬಳಕೆದಾರರಿಗೆ ಮತ್ತೆ ಅಗತ್ಯ ಪ್ರಮಾಣದಲ್ಲಿ LPG ಸಿಲಿಂಡರ್‌ಗಳು ಲಭ್ಯವಾಗಲಿದ್ದು, ಬೆಲೆ ಏರಿಕೆ ಹಾಗೂ ಪೂರೈಕೆ ಕೊರತೆಯ ಆತಂಕವೂ ಕಡಿಮೆಯಾಗುವ ನಿರೀಕ್ಷೆಯಿದೆ. ವ್ಯಾಪಾರ ವಲಯ ಈ ನಿರ್ಧಾರವನ್ನು ಸ್ವಾಗತಿಸಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!