ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ | ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶ

Picture of Savistara

Savistara

Bureau Report

ಉಡುಪಿ: ರಾಷ್ಟ್ರೀಯ ಹೆದ್ದಾರಿ(169-ಎ)ಯ ತೀರ್ಥಹಳ್ಳಿ- ಮಲ್ಪೆ ರಸ್ತೆ ಮಾರ್ಗದ ಆಗುಂಬೆ ಘಾಟಿಯಲ್ಲಿ ಮಳೆ ಹಾಗೂ ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಸಂಭವವಿದೆ. ಆದ್ದರಿಂದ ಆಗುಂಬೆ ಘಾಟಿ ಮೂಲಕ ಸೆ.30ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಿ, ಭಾರಿ ವಾಹನ ಸಂಚಾರ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶಿಸಿದ್ದಾರೆ.

ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ ನಗರ, ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಮತ್ತು ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ, ಜಯಪುರ, ಬಾಳೆಹೊಳೆ, ಕಳಸ, ಕುದುರೆಮುಖ ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!