ಎಸಿಎಸ್, ಅಭಿವೃದ್ಧಿ ಆಯುಕ್ತರಿಗೆ ಜವಾಬ್ದಾರಿ ನಿಗದಿ |2 ತಿಂಗಳ ಒಳಗೆ ಅಧಿಸೂಚನೆ |70 ಸಾವಿರ ಹುದ್ದೆ ಭರ್ತಿಗೆ 6 ತಿಂಗಳ ಗಡುವು

Picture of Savistara

Savistara

Bureau Report

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಕಾಯುತ್ತಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಒಟ್ಟು 72,186 ನೇರ ನೇಮಕಾತಿ ಹುದ್ದೆಗಳನ್ನು ತ್ವರಿತಗತಿಯಲ್ಲಿ ಭರ್ತಿ ಮಾಡಲು ಅನುಮೋದನೆ ನೀಡಿದ್ದು, ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಪ್ರಕ್ರಿಯೆ ಆರಂಭಿಸಿದೆ. ಪ್ರಸ್ತಾವನೆಯ ವಿವರಗಳ ಪ್ರಕಾರ, 2023-24ನೇ ಸಾಲಿನಿಂದ ಇಂದಿನವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಇದರೊಂದಿಗೆ ಕಲ್ಯಾಣ- ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇಕಡಾ 80ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸಹ ಆರ್ಥಿಕ ಇಲಾಖೆಯು ಪರಿಭಾವಿತ ಸಹಮತಿ ನೀಡಿದೆ.ಪಾರದರ್ಶಕ, ತ್ವರಿತ ನೇಮಕ: ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಹಾಗೂ ತ್ವರಿತವಾಗಿ ನಡೆಸಲು ಸರ್ಕಾರವು ಕಾಲಮಿತಿಯನ್ನು ನಿಗದಿಪಡಿಸಿದೆ. ಮುಂದಿನ 2 ತಿಂಗಳುಗಳ ಒಳಗಾಗಿ ನೇಮಕಾತಿಅಧಿಸೂಚನೆಗಳನ್ನು ಹೊರಡಿಸಬೇಕು.

ಕೆಪಿಎಸ್ಸಿ ಸಿದ್ಧತೆ ಏನು?

ಕರ್ನಾಟಕ ಲೋಕಸೇವಾ ಆಯೋಗವು ಜುಲೈ ಆರಂಭದಲ್ಲಿ ಹೊಸ ಅಧಿಸೂಚನೆಗಳನ್ನು ಹೊರಡಿಸಲು ಸಿದ್ಧತೆ ನಡೆಸಿದೆ. ತನ್ನಲ್ಲಿ ಬಾಕಿ ಆಗಿರುವ ನೇಮಕ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಮುಗಿಸುವುದಕ್ಕೆ ಆದ್ಯತೆ ನೀಡಿದ್ದ ಆಯೋಗ ಇದೀಗ ಹೊಸ ಅಧಿಸೂಚನೆ ಹೊರಡಿಸುವ ಸಂಬಂಧವೂ ಪ್ರಕ್ರಿಯೆ ಆರಂಭಿಸಿದೆ. 12 ಇಲಾಖೆಗಳು ತಮ್ಮ ಕೋರಿಕೆಯನ್ನು ಆಯೋಗಕ್ಕೆ ಸಲ್ಲಿಸಿವೆ. ಕೆಲವು ಒಳ ಮೀಸಲು ಹಂಚಿಕೆ ರೋಸ್ಟರ್ ಪಾಲನೆ ಇವೆ. ಜೂನ್ ಅಂತ್ಯಕ್ಕೆ ಯಾವುದೆಲ್ಲ ಅಂತಿಮಗೊಳ್ಳುತ್ತದೋ ಅದೆಲ್ಲವನ್ನೂ ಸೇರಿಸಿ ಜುಲೈ ಮೊದಲಿಗೆ ವಿಚಾರದಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಪ್ರಸ್ತಾವನೆಯನ್ನು ಸರಿಪಡಿಸುವ ಪ್ರಕ್ರಿಯೆಯಲ್ಲಿ ಇವೆ. ಜೂನ್ ಅಂತ್ಯದಲ್ಲಿ ಯಾವುದೆಲ್ಲ ಅಂತ್ಯಗೊಳ್ಳುತ್ತದೆಯೋ ಅದಿಲ್ಲ ಸೇರಿಸಿ ಜುಲೈ ಮೊದಲಿಗೆ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ.

ಉಸ್ತುವಾರಿ ಜವಾಬ್ದಾರಿ

ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಆಸ್ಪದ ನೀಡದಂತೆ ಉಸ್ತುವಾರಿ ನೋಡಿಕೊಳ್ಳಲು ಸರ್ಕಾರವು ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಿದೆ. 17 ಇಲಾಖೆಗಳ ನೇರ ನೇಮಕಾತಿ ಉಸ್ತುವಾರಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ವಹಿಸಲಾಗಿದೆ. 34 ಇಲಾಖೆಗಳ ನೇಮಕಾತಿಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ವಹಿಸಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!