ರಾಮಮಂದಿರ ದೇಣಿಗೆ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚ೦ಪತ್ ರಾಯ್ ರಾಜೀನಾಮೆ

Picture of Savistara

Savistara

Bureau Report

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರಕ್ಕೆ ನಗದು ಮತ್ತುವಸ್ತು ರೂಪದಲ್ಲಿ ಬಂದಿರುವ ದೇಣಿಗೆಗಳ ವ್ಯಾಪಕ ದುರುಪಯೋಗ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ತಮ್ಮ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಕಟ್ಟುನಿಟ್ಟಿನ ಆದೇಶ ಮತ್ತು ದೇಣಿಗೆಗಳ ದುರುಪಯೋಗ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಾಥಮಿಕ ವರದಿ ಸಲ್ಲಿಸಿದ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಉನ್ನತ ಪದಾಧಿಕಾರಿಗಳ ರಾಜೀನಾಮೆ ಹೊರಬಿದ್ದಿದೆ.ರಾಮಮಂದಿರದಲ್ಲಿ ₹7ರಿಂದ ₹7.5 ಕೋಟಿ ಮೌಲ್ಯದ ದೇಣಿಗೆ ಹಣ ನಾಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ.

ಎಸ್‌ಐಟಿಯ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ರಾಮಮಂದಿರದಲ್ಲಿ ನಗದು ಎಣಿಕೆ ಕಾರ್ಯದಲ್ಲಿ ತೊಡಗಿದ್ದ ಆರು ಸಿಬ್ಬಂದಿ ಸೇರಿದಂತೆ ಒಟ್ಟು ಎಂಟು ಮಂದಿ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಕೃಷ್ಣ ಮೋಹನ್ ಸಲ್ಲಿಸಿದ ದೂರಿನ ಮೇರೆಗೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ.ರಮಾಶಂಕ‌ರ್ ಯಾದವ್ ಅಲಿಯಾಸ್ ಟಿನ್ನು, ಅವಿನಾಶ್ ಶುಕ್ಲಾ, ಅನುಕಲ್ಸ್ ಮಿಶ್ರಾ, ಲವಕುಶ್ ಮಿಶ್ರಾ, ಮನೀಶ್ ಯಾದವ್, ರಮಾಶಂಕ‌ರ್ ಮಿಶ್ರಾ, ಸುಭಾಷ್ ಮತ್ತು ಕರುಣೇಶ್ ಅವರನ್ನು ಪ್ರಮುಖ ಆರೋಪಿಗಳೆಂದು ಹೆಸರಿಸಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

[t4b-ticker]
error: Content is protected !!