ಪುಂಜಾಲಕಟ್ಟೆ8.26: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷಿ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು 2026-27 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂದಿಸಿದಂತೆತೋಟಗಾರಿಕೆ ಇಲಾಖೆ ಜಾರಿಗೊಳಿಸಿದ್ದು,ರೈತರು. ಇದರ ಸದುಪಯೋಗ ಪಡೆಯುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಅಡಿಕೆ, ಕರಿಮೆಣಸು, ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆವಿಮೆ ಬೆಳೆಸಾಲ ಮಾಡಲು ಪ್ರೀಮಿಯಂ ಪಾವತಿಸಲು ಪ್ರಾರಂಭವಾಗಿದ್ದು, ಪಡೆದಿರುವ ರೈತರು ತಾವು ಬೆಳೆ ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಸಿ ಪ್ರೀಮಿಯಂ ಮೊತ್ತ ಪಾವತಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆ ಸಾಲ ಹೊಂದಿಲ್ಲದ ರೈತರು ಸಹ ಈ ಯೋಜನೆಯಡಿಯಲ್ಲಿ ಪ್ರೀಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದಾಗಿದ್ದು, ರೈತರುತಾವು ಬೆಳೆದ ಬೆಳೆಗಳನ್ನು ಬೆಳೆ ಸಮೀಕ್ಷೆ ಮಾಡಿಸಬೇಕು ಹಾಗೂ ಫಾರ್ಮರ್ ಐಡಿ ಹೊಂದಿರಬೇಕು ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಎಕರೆ ಒಂದಕ್ಕೆ ರೂ. 2591 ಮತ್ತು ಕರಿಮೆಣಸು ಎಕರೆ ಒಂದಕ್ಕೆ ರೂ.951 ವಿಮೆ ಕಂತು ಪಾವತಿಸಬೇಕಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ.ಈ ಯೋಜನೆಯ ನೋಂದಣಿಗೆ ಜುಲೈ 31 ಕೊನೆಯ ದಿನಾಂಕವಾಗಿದ್ದು, ಬೆಳೆಸಾಲ ಪಡೆದಿರುವ ಎಲ್ಲಾ ರೈತ ಬಾಂದವರು ಜಮೀನಿನ ಆರ್ ಟಿ ಸಿ ಯೊಂದಿಗೆ ಆಧಾರ್‌ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ನಾಮಿನಿಯ ಆಧಾರ್‌ನೊಂದಿಗೆ ನಿಗದಿತ ಅವಯೊಳಗೆ ತಮ್ಮ ಕಾರ್ಯ ವ್ಯಾಪ್ತಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಚೇರಿಗಳನ್ನು ಸಂಪರ್ಕಿಸಿ ಬೆಳೆವಿಮೆ ಯೋಜನೆ ಪ್ರಯೋಜನ ಪಡೆಯಬೇಕೆಂದು ಸಿದ್ದಕಟ್ಟೆ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟನೆಯ ಮೂಲಕ ರೈತರಿಗೆ ವಿನಂತಿ ಮಾಡಿದ್ದಾರೆ.










































