ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯುಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಹವಾಮಾನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ.ಜುಲೈ 1ರಿಂದ 3ರವರೆಗೆ ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದ್ದು, ಜುಲೈ 3 ರಿಂದ 4 ರವರೆಗೆ ಕರಾವಳಿ ಭಾಗದಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಬೆಳಗಾವಿ ಮತ್ತು ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.ರಾಜ್ಯದ ಉಳಿದ ಭಾಗಗಳಲ್ಲಿ ಈ ಅವಧಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಪ್ರದೇಶದ ನಿವಾಸಿಗಳು ಹವಾಮಾನ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸಲಹೆ ನೀಡಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ
Savistara
Bureau Report
[t4b-ticker]











































