ತಾಲೂಕು ಮಟ್ಟದಲ್ಲೂ ಸುಸಜ್ಜಿತ ಸರಕಾರಿ ಆಸ್ಪತ್ರೆಗಳು: ಶರಣ್ ಪ್ರಕಾಶ್ ಪಾಟೀಲ್‌

Picture of Savistara

Savistara

Bureau Report

ಬೆಂಗಳೂರು, ಜು.1: ಕಿದ್ವಾಯಿ, ನಿಮ್ಹಾನ್ಸ್ ಮಾದರಿ ಆಸ್ಪತ್ರೆಗಳನ್ನು ತಾಲೂಕು ಪ್ರದೇಶಗಳಲ್ಲಿ ನಿರ್ಮಿಸಬೇಕು. ಪ್ರತಿಭಾವಂತ ಬಡ ವೈದ್ಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ರ ಸಿಗಬೇಕೆಂದು ಸಚಿವ ಡಾ। ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ‘ವೈದ್ಯರ ದಿನಾಚರಣೆ – 2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಲೂಕು ಮಟ್ಟದಲ್ಲಿ ಕಿದ್ವಾಯಿ, ನಿಮ್ಹಾನ್ಸ್‌ಗಳಂತಹ ಸುಸಜ್ಜಿತ ಆಸ್ಪತ್ರೆಗಳನ್ನು ತೆರೆಯುವ ಬಗ್ಗೆ ಚಿಂತನೆಗಳು ನಡೆಯುತ್ತಿದೆ. ಖಾಸಗಿ ಮೆಡಿಕಲ್ ಕಾಲೇಜುಗಳಿಗಿಂತ ಸರಕಾರಿ ಮೆಡಿಕಲ್ ಕಾಲೇಜುಗಳನ್ನು ಹೆಚ್ಚಿಸಬೇಕು. ಖಾಸಗಿಯಲ್ಲಿ ಆರ್ಥಿಕವಾಗಿ ಸಬಲರಾಗಿರುವವರು ದುಡ್ಡು ಕೊಟ್ಟು ಸೀಟು ಗಿಟ್ಟಿಸಿಕೊಳ್ಳುತ್ತಾರೆ. ಹೀಗಾಗಿ ಸರಕಾರಿ ಮೆಡಿಕಲ್ ಕಾಲೇಜುಗಳನ್ನು ಹೆಚ್ಚಿಸುವ ಚಿಂತನೆ ಇದೆ ಎಂದರು.

[t4b-ticker]
error: Content is protected !!