ದಕ್ಷಿಣ ಕನ್ನಡದಲ್ಲಿ ಆರೆಂಜ್ ಘೋಷಣೆ-ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದೂ ರಜೆ

Picture of Savistara

Savistara

Bureau Report

ಪುತ್ತೂರು:ದ.ಕ.ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿರುವುದರಿಂದ ಜು.3ರಂದೂ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ)ರ ಅನ್ವಯ ನಿಯಮಾನುಸಾರ ಕಾನೂನು ಕ್ರಮತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!