ಬೆಂಗಳೂರಿನಲ್ಲಿ ಸಚಿವ ಕೃಷ್ಣಭೈರೇಗೌಡ ರಾತ್ರಿ ಸಿಟಿ ರೌಂಡ್ಸ್, ಇಂಜಿನಿಯರ್‌ಗಳಿಗೆ ತರಾಟೆ

Picture of Savistara

Savistara

Bureau Report

ಬಿ-ಸ್ಟೈಲ್ ವತಿಯಿಂದ ಸಿಲ್ಕ್ ಬೋರ್ಡ್‌ನಿಂದ ಬೈಯ್ಯಪ್ಪನಹಳ್ಳಿವರೆಗಿನ 17.1 ಕಿ.ಮೀ ಉದ್ದದ ರಸ್ತೆಯನ್ನು ಜಾಗತಿಕ ಮಟ್ಟದ ವಿನ್ಯಾಸಕ್ಕೆ ಅಭಿವೃದ್ಧಿಪಡಿಸಲು 400 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಇದರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಲೌರಿ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಖುದ್ದು ಪರಿಸ್ಥಿತಿ ಅವಲೋಕಿಸಿದ ಸಚಿವರು, ನೇತಾಡುತ್ತಿದ್ದ ಬೆಸ್ಕಾಂ ತಂತಿಗಳು ಹಾಗೂ ಹಾಳಾದ ಸರ್ವೀಸ್ ರಸ್ತೆಗಳನ್ನು ಕಂಡು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಯಾವುದೇ ರಾಜಿ ಇಲ್ಲದೆ ಒಂದೇ ಮಾದರಿಯ ವಿನ್ಯಾಸ ರೂಪಿಸಲು ಆದೇಶಿಸಿದರು.

ಬೆಂಗಳೂರಿನ ಔಟರ್ ರಿಂಗ್ ರೋಡ್ ಭಾಗದಲ್ಲಿ ರಸ್ತೆ ಗುಂಡಿ, ಧೂಳು ಮತ್ತು ಚರಂಡಿಗಳ ಅವ್ಯವಸ್ಥೆಗೆ ಬ್ರೇಕ್ ಹಾಕಲು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ರಾತ್ರಿ ಫೀಲ್ಡ್‌ಗೆ ಇಳಿದಿದ್ದಾರೆ.ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಸಚಿವರು, ಸಿಲ್ಕ್ ಬೋರ್ಡ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ವರೆಗಿನ ರಸ್ತೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ ಇತ್ತೀಚೆಗೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ಸಮರ್ಥಿಸಿಕೊಂಡ ಅವರು, ಫುಟ್‌ಪಾತ್‌ಗಳ ಅವ್ಯವಸ್ಥೆಯಿಂದಾಗಿ ನಗರದಲ್ಲಿ ಪ್ರತಿವರ್ಷ 300 ಅಮಾಯಕರು ರಸ್ತೆ ಅಪಘಾತಗಳಲ್ಲಿ ಮೃತಪಡುತ್ತಿದ್ದಾರೆ ಎಂದು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

ಬಿ-ಸ್ಟೈಲ್ ವತಿಯಿಂದ ಸಿಲ್ಕ್ ಬೋರ್ಡ್‌ನಿಂದ ಬೈಯ್ಯಪ್ಪನಹಳ್ಳಿವರೆಗಿನ 17.1 ಕಿ.ಮೀ ಉದ್ದದ ರಸ್ತೆಯನ್ನು ಜಾಗತಿಕ ಮಟ್ಟದ ವಿನ್ಯಾಸಕ್ಕೆ ಅಭಿವೃದ್ಧಿಪಡಿಸಲು 400 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಇದರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಲೌರಿ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಖುದ್ದು ಪರಿಸ್ಥಿತಿ ಅವಲೋಕಿಸಿದ ಸಚಿವರು, ನೇತಾಡುತ್ತಿದ್ದ ಬೆಸ್ಕಾಂ ತಂತಿಗಳು ಹಾಗೂ ಹಾಳಾದ ಸರ್ವೀಸ್ ರಸ್ತೆಗಳನ್ನು ಕಂಡು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಯಾವುದೇ ರಾಜಿ ಇಲ್ಲದೆ ಒಂದೇ ಮಾದರಿಯ ವಿನ್ಯಾಸ ರೂಪಿಸಲು ಆದೇಶಿಸಿದರು.

[t4b-ticker]
error: Content is protected !!