ಮಾದಾಪಟ್ಟಣದ ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು: ಮೂವರ ಬಂಧನ

Picture of Savistara

Savistara

Bureau Report

ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದ ಗ್ರಾಮದ ಕಾವೇರಿ ಕ್ವಾರಿಯಲ್ಲಿ ಕಲ್ಲುಬಂಡೆ ಬಿದ್ದು ಏಳು ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.ತಾವರೆಕೆರೆ ಠಾಣೆ ಪೊಲೀಸರು ಸಾಯಿ ರಾಮ್ ಕ್ರಷರ್ ಮಾಲೀಕ ಪಾಂಡುರಂಗ, ಕ್ವಾರಿ ಇನ್‌ಚಾರ್ಜ್ ಲೋಕೇಶ್ ಮತ್ತು ಲೋಕಲ್ ಇನ್‌ಚಾರ್ಜ್ ರಾಜು ಎನ್ನುವವರನ್ನು ಬಂಧಿಸಿದ್ದಾರೆ.ಬಸವೇಶ್ವರ ಕ್ರಷ‌ರ್ ಅನ್ನು ಲೀಸ್‌ಗೆ ಪಡೆದಿದ್ದ ಪಾಂಡುರಂಗ ಸೇರಿದಂತೆ ಮೂವರನ್ನು ತನಿಖೆಗೆ ಒಳಪಡಿಸಲಾಗಿದೆ. ಕಾರ್ಮಿಕ ಗೋಪಿಕೃಷ್ಣನ್ ನೀಡಿದ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ, ಕಾವೇರಿ ಕ್ರಷರ್ ಮಾಲೀಕ ಉದಯ್ ಶಂಕರ್ ಮತ್ತು ಬಸವೇಶ್ವರ ಕ್ರಷರ್ ಮಾಲೀಕ ಡಿ.ಆನಂದಸ್ವಾಮಿ ಇನ್ನೂ ಬಂಧನವಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!