ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

Picture of Savistara

Savistara

Bureau Report

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳು, ರಸ್ತೆ ಬದಿಯ ಇಳಿಜಾರುಗಳು ಹಾಗೂ ಬೆಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಅಪಾಯವಿರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ವಿಶೇಷವಾಗಿ ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಭಾಗಗಳಲ್ಲಿ ಮಳೆಯ ಪರಿಸ್ಥಿತಿಯನ್ನು ಗಮನಿಸಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

[t4b-ticker]
error: Content is protected !!