ಶಾಲೆಗಳ ಸಮೀಪ ‘ಸ್ಟಿಂಗ್’ ಮಾರಾಟ ನಿಷೇಧಿಸಿದ ಮಹಾರಾಷ್ಟ್ರಸರ್ಕಾರ

Picture of Savistara

Savistara

Bureau Report

ಮುಂಬೈ: ಶಾಲೆಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ‘ಸ್ಟಿಂಗ್’ ಶಕ್ತಿವರ್ಧಕ ಪಾನೀಯ ಮತ್ತು ಇತರ ನಶೆಯ ವಸ್ತುಗಳ ಮಾರಾಟವನ್ನು ನಿಷೇಧಿಸಿರುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿದೆ.

‘ಸ್ಟಿಂಗ್’ ಪಾನೀಯದಲ್ಲಿರುವ ಕೆಲವು ಅಂಶಗಳು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಳವಳ ವ್ಯಕ್ತವಾದ ಬಳಿಕ ಸರ್ಕಾರ ಈ ಕ್ರಮ ಕೈಗೊಂಡಿದೆ.ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ವಿಕ್ರಮ್ ಪಚಪುತೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆಹಾರ ಖಾತೆ ಸಚಿವ ನರಹರಿ ಜಿರ್ವಾಲ್‌ ಅವರು, ‘ಪಾನೀಯವು ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ತೀವ್ರ ಕಳವಳ ವ್ಯಕ್ತವಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.ಶಕ್ತಿವರ್ಧಕ ಪಾನೀಯಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲು ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!