‘ಬಾಸ್ ಯಾರು ಎಂಬುದು ನೆತನ್ಯಾಹುಗೆ ಗೊತ್ತು’: ಡೊನಾಲ್ಡ್‌ ಟ್ರಂಪ್

Picture of Savistara

Savistara

Bureau Report

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲೇ ಶ್ವೇತಭವನದಲ್ಲಿ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಈ ಸಂಭಾವ್ಯ ಭೇಟಿಗೂ ಮುನ್ನ ಪ್ರತಿಕ್ರಿಯಿಸಿರುವ ಟ್ರಂಪ್, ‘ನಮ್ಮಿಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಅಲ್ಲದೆ ನಿಜವಾದ ‘ಬಾಸ್’ ಯಾರು ಎಂಬುದು ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ’ ಎಂದು ಹೇಳಿದ್ದಾರೆ.’ಆಕ್ಸಿಯೋಸ್’ ಈ ಕುರಿತು ವರದಿ ಮಾಡಿದೆ.ಮುಂದಿನ ವಾರ ನಡೆಯಲಿರುವ ನ್ಯಾಟೊ ಶೃಂಗಸಭೆಯ ಬಳಿಕ ಉಭಯ ನಾಯಕರ ಭೇಟಿಯಾಗುವ ಸಾಧ್ಯತೆಯಿದೆ.

ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಟ್ರಂಪ್‌ ಅವರಿಗೆ ದೂರವಾಣಿ ಕರೆ ಮಾಡಿ ನೆತನ್ಯಾಹು ಶುಭಕೋರಿದ್ದರು. ಈ ವೇಳೆ ಇಬ್ಬರೂ ಶೀಘ್ರದಲ್ಲೇ ಅಮೆರಿಕದಲ್ಲಿ ಭೇಟಿಯಾಗಲು ನಿರ್ಧರಿಸಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ತಿಳಿಸಿದೆ.

ಭಿನ್ನಮತ ಶಮನ?

ಫೆಬ್ರುವರಿಯಲ್ಲಿ ನಡೆದ ಭೇಟಿಯ ನಂತರ ನೆತನ್ಯಾಹು ನಡೆಗಳ ಬಗ್ಗೆ ಟ್ರಂಪ್ ಅವರಲ್ಲಿ ತೀವ್ರ ಅಸಮಾಧಾನ ಉಂಟಾಗಿತ್ತು. ಪ್ರಾದೇಶಿಕ ಭದ್ರತೆ, ಇರಾನ್ ಮತ್ತು ಲೆಬನಾನ್ ಮೇಲಿನ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಗಳ ವಿಷಯದಲ್ಲಿ ಟ್ರಂಪ್‌ ಹಾಗೂ ನೆತನ್ಯಾಹು ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಈ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.ಅತ್ತ ಇಸ್ರೇಲ್‌ನಲ್ಲಿ ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಟ್ರಂಪ್‌ ಅವರೊಂದಿಗಿನ ಭೇಟಿಯು ನೆತನ್ಯಾಹು ಪಾಲಿಗೆ ನಿರ್ಣಾಯಕವೆನಿಸಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!