ಕಾರವಾರದಲ್ಲಿ ಭೀಕರ ರಸ್ತೆ ಅಪಘಾತ: ಕ್ರೂಸರ್-ಲಾರಿ ಮುಖಾಮುಖಿ, 6 ಜನರ ದಾರುಣ ಸಾ*ವು

Picture of Savistara

Savistara

Bureau Report

ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಆರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದೆ.ಧಾರವಾಡ ಮೂಲದ ಬಸವರಾಜ, ಆಭಿಷೇಕ,ಅಕ್ಷಯ,ಅಭಿಷೇಕ, ಸಂಜಯ,ಮಂಜುನಾಥ ಮತ್ತು ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದು ಶಿವರಾಜ, ಚೆನ್ನಬಸು, ಸಚಿನ್ ಎನ್ನುವವರು ಗಾಯಗೊಂಡಿದ್ದಾರೆ.ಧಾರವಾಡದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕ್ರೂಸರ್ ವಾಹನ ಯಲ್ಲಾಪುರ ಆರ್ತಿಬೈಲ್ ಬಳಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ಸಂಪೂರ್ಣ ನುಜ್ಜಾಗಿದ್ದು ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.ಅಪಘಾತದ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!