ಸ್ಪೇನ್‌ನಲ್ಲಿ ಭೀಕರ ಕಾಡಿಚ್ಚು | 12 ಬಲಿ

Picture of Savistara

Savistara

Bureau Report

ದಕ್ಷಿಣ ಸ್ಪೇನ್‌ನ ಅರಿಯಾ (Almería) ಪ್ರಾಂತ್ಯದಲ್ಲಿ ಸಂಭವಿಸಿರುವ ಭೀಕರ ಕಾಡಿಚ್ಚಿನಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 23ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ತೀವ್ರ ಬಿಸಿಲು, ಒಣ ಹವಾಮಾನ ಮತ್ತು ಬಲವಾದ ಗಾಳಿಯಿಂದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ಆಕಾಶವೇ ಕಿತ್ತಳೆ ಬಣ್ಣಕ್ಕೆ ತಿರುಗುವಷ್ಟು ದಟ್ಟ ಹೊಗೆ ಆವರಿಸಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಹಲವರು ವಾಹನಗಳಲ್ಲಿ ಹಾಗೂ ಕಾಲ್ನಡಿಗೆಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುವಾಗ ಬೆಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಸುಮಾರು 800 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 150ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸೇನಾ ತುರ್ತು ಪಡೆಗಳು ಬೆಂಕಿಯನ್ನು ನಿಯಂತ್ರಿಸಲು ಹೋರಾಟ ನಡೆಸುತ್ತಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಬೆಂಕಿಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಆದರೆ ತೀವ್ರ ಬಿಸಿಗಾಳಿ ಮತ್ತು ಒಣಗಿದ ಸಸ್ಯವರ್ಗದಿಂದ ಬೆಂಕಿ ಅತ್ಯಂತ ವೇಗವಾಗಿ ಹರಡಿದೆ. ಅಧಿಕಾರಿಗಳು ಅಧಿಕೃತ ಸ್ಥಳಾಂತರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ವಿಜ್ಞಾನಿಗಳ ಪ್ರಕಾರ, ಯುರೋಪಿನಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದ ಕಾಡಿಚ್ಚಿನ ಪ್ರಮಾಣ ಹಾಗೂ ತೀವ್ರತೆ ಹೆಚ್ಚುತ್ತಿದ್ದು, ಇಂತಹ ದುರಂತಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಸವಾಲಾಗಿ ಪರಿಣಮಿಸುವ ಸಾಧ್ಯತೆಯಿದೆ.

[t4b-ticker]
error: Content is protected !!