ಅಕ್ಟೋಬರ್‌ನಲ್ಲಿ ಪಂಚಾಯತ್ ಚುನಾವಣೆ : ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ

Picture of Savistara

Savistara

Bureau Report

ರಾಜ್ಯದ ಬಹುತೇಕ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನ‌ರ್ ವಿಂಗಡಣೆ ಮಾಡಬೇಕಾಗಿ ಬಂದಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಆಯೋಗವು 45 ದಿನಗಳಲ್ಲಿ ಚುನಾವಣೆ ನಡೆಸುತ್ತದೆ ಎಂದರು.ರಾಜ್ಯದಲ್ಲಿ ಎಸ್‌ಐಆ‌ರ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಿಬ್ಬಂದಿ ಆ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗಿದೆ. ಸ್ವಲ್ಪ ಕಾಲಾವಕಾಶ ಕೇಳಲಾಗಿದೆ ಎಂದು ತಿಳಿಸಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!