ಅಮೆರಿಕದ ದಾಳಿಗೆ ಪ್ರತಿಯಾಗಿ ‘ಶತ್ರು ನೆಲೆಗಳ’ ಮೇಲೆ ಇರಾನ್ ನಿಂದ ಕ್ಷಿಪಣಿ, ಡೋನ್ ದಾಳಿ

Picture of Savistara

Savistara

Bureau Report

ಟೆಹ್ರಾನ್: ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ನಿರಂತರದಾಳಿಗಳಿಗೆ ಪ್ರತಿಯಾಗಿ, ಈ ಪ್ರದೇಶದಲ್ಲಿನ ‘ಶತ್ರು ನೆಲೆಗಳು’ ಎಂದು ಗುರುತಿಸಲಾದ ಸ್ಥಳಗಳ ಮೇಲೆ ಇರಾನ್ ಸೇನೆ ಹಾಗೂ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದೊಡ್ಡ ಪ್ರಮಾಣದ ಕ್ಷಿಪಣಿ ಮತ್ತು ಡೋನ್ ದಾಳಿಗಳನ್ನು ನಡೆಸಿವೆ ಎಂದು ಇರಾನ್‌ನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ನ ನೂರ್ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಕಳೆದ 48 ಗಂಟೆಗಳಲ್ಲಿ ‘ಶತ್ರು ಚಲನವಲನಗಳು’ ಕಂಡುಬಂದ ಹಿನ್ನೆಲೆಯಲ್ಲಿ ಗುರುತಿಸಲಾದ ಗುರಿಗಳನ್ನು ಉದ್ದೇಶಿಸಿ ಈ ಕಾರ್ಯಾಚರಣೆ ಆರಂಭಿಸಲಾಗಿದೆ. ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ನಿರಂತರ ದಾಳಿಗಳಿಗೆ ಪ್ರತಿಕ್ರಿಯೆಯಾಗಿಯೇ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಇರಾನ್‌ನ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.’ಶತ್ರು ನೆಲೆಗಳು’ ಎಂದು ಗುರುತಿಸಲಾದ ಪ್ರದೇಶಗಳ ಮೇಲೆ ಕ್ಷಿಪಣಿ ಹಾಗೂ ಡೋನ್‌ಗಳನ್ನು ಬಳಸಿ ವ್ಯಾಪಕ ದಾಳಿ ನಡೆಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ದಾಳಿಯಲ್ಲಿ ಯಾವೆಲ್ಲ ಸ್ಥಳಗಳು ಗುರಿಯಾಗಿವೆ, ಎಷ್ಟು ಪ್ರಮಾಣದ ಹಾನಿಯಾಗಿದೆ ಅಥವಾ ಸಾವು-ನೋವು ಸಂಭವಿಸಿದ್ದೆಯೇ ಎಂಬ ಬಗ್ಗೆ ಇರಾನ್ ಅಧಿಕಾರಿಗಳು ತಕ್ಷಣದ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು Aljazeera ವರದಿ ಮಾಡಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!