ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಶಾಕ್: ಗಡಿಪಾರು ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

Picture of Savistara

Savistara

Bureau Report

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಅವರನ್ನು ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿಗಳು ನೀಡಿದ್ದ ಆದೇಶವನ್ನುಎತ್ತಿ ಹಿಡಿದಿದೆ.

ಪುತ್ತೂರು ಉಪವಿಭಾಗಾಧಿಕಾರಿ (AC) ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮೂರನೇ ಬಾರಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಅವರು ಮೊದಲು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್‌ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜುಲೈ 13ರಂದು ಅವರ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಗಡಿಪಾರು ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!