‘ಹೆಣ್ಣಾನೆ ಇದ್ರೆ ದಾನ ಮಾಡಿ..’ ಕೇರಳ ಸಿಎಂಗೆ ಪತ್ರ ಬರೆದ ಸಿಎಂ ಡಿಕೆ ಶಿವಕುಮಾರ್‌

Picture of Savistara

Savistara

Bureau Report

ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆಯುಳ್ಳ ಕರ್ನಾಟಕದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದೆ.

ನೆರೆರಾಜ್ಯಗಳಿಗೆ ಸಾಕಾನೆಗಳನ್ನು ದಾನ ಮಾಡುವ ಅಥವಾ ವರ್ಗಾವಣೆ ಮಾಡುವಂತೆ ಕೇರಳ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ಕೇರಳದ ಯಾವುದೇ ದೇವಸ್ಥಾನದಿಂದ ಇಚ್ಛಾಪೂರ್ವಕವಾಗಿ ಹೆಣ್ಣು ಆನೆಯೊಂದನ್ನು ದಾನವಾಗಿ ನೀಡಲು ಅನುಕೂಲ ಮಾಡಿಕೊಡಬೇಕು ಎಂದು ಕೋರಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳು ಮತ್ತು ದೇವಸ್ಥಾನದ ಆಚರಣೆಗಳಲ್ಲಿ ಭಾಗವಹಿಸಲು ಆನೆಯ ಅಗತ್ಯವಿದೆ. ಚಾಲ್ತಿಯಲ್ಲಿರುವ ಎಲ್ಲಾ ಕಾನೂನು ನಿಬಂಧನೆಗಳು ಮತ್ತು ನಿಯಮಾವಳಿಗಳಿಗೆ ಬದ್ಧವಾಗಿಯೇ ಈ ಆನೆ ದಾನದ ಪ್ರಕ್ರಿಯೆಗೆ ನೆರವಾಗಬೇಕು ಎಂದು ಸಿಎಂ ಡಿ.ಕೆ. ಶಿವಕುಮಾ‌ರ್ ಪತ್ರದಲ್ಲಿ ವಿನಂತಿಸಿದ್ದಾರೆ. ಕೇರಳ ಸರ್ಕಾರದ ಈ ತ ನಡೆ ಉಭಯ ರಾಜ್ಯಗಳ ನಡುವಿನ ಶತಮಾನಗಳಷ್ಟು ಹಳೆಯದಾದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!