ಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ದ.ಕ ಜಿಲ್ಲೆಯ 23 ಕಂಬಳಗಳಿಗೆ ಒಟ್ಟು 1.15 ಕೋಟಿ ರೂ. ಬಿಡುಗಡೆಯಾಗಿದೆ.ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಳೆದ ಬಾರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ವಿಧಾನಸಭಾ ಅಧಿವೇಶನದಲ್ಲೂ ಕಂಬಳಕ್ಕೆ ಸರಕಾರ ಸಹಕಾರ ನೀಡಬೇಕೆಂದು ಒತ್ತಾಯಿಸಿದ್ದರು.ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ಮೂಲಕ ಈ ಅನುದಾನ ಬಿಡುಗಡೆಯಾಗಿದೆ. ಶಾಸಕ ಅಶೋಕ್ ರೈ ಅವರ ನಿರಂತರ ಪ್ರಯತ್ನದ ಫಲವಾಗಿ ಉಭಯ ಜಿಲ್ಲೆಗಳ ಕಂಬಳಕ್ಕೆ ತಲಾ 5 ಲಕ್ಷ ಅನುದಾನ ಮಂಜೂರಾಗಿದೆ.
ದ ಕ ಮತ್ತು ಉಡುಪಿ ಜಿಲ್ಲೆಯ ಸುಮಾರು 23 ಕಂಬಳ ಕ್ಕೆ 1.15 ಕೋಟಿ ಅನುದಾನ ಮಂಜೂರಾಗಿದೆ. ಕಂಬಳಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಅನುದಾನ ನೀಡಲಾಗಿದೆ. ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಈ ಅನುದಾನ ಮಂಜೂರುಗೊಂಡಿರುವುದು ಅತ್ಯಂತ ಸಂತಸವನ್ನು ತಂದಿದೆ.
ಅಶೋಕ್ ರೈ ಶಾಸಕರು ಪುತ್ತೂರು











































