Bantwal: ಬಿ.ಸಿ.ರೋಡ್ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನಲ್ಲಿ ಬಂಧನ | ಇಲಿ ಪಾಷಾಣ ಸೇವಿಸಿದ್ದ ಆರೋಪಿ |ಆಸ್ಪತ್ರೆಗೆ ದಾಖಲು

Picture of Savistara

Savistara

Bureau Report

ಬಂಟ್ವಾಳ: ಬಿ.ಸಿ.ರೋಡ್‌ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣದಲ್ಲಿಗುರುವಾರ (ಜು.16) ಸಂಜೆ ಯುವತಿಯೊಬ್ಬಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಅರೋಪಿಯು ವಿಷಪ್ರಾಷನ ಮಾಡಿದ್ದು, ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಂಟ್ವಾಳ ತಾಲೂಕಿನ ಉಳಿ ಗ್ರಾಮ ನಿವಾಸಿ ಲಾವಣ್ಯಾ (21) ಎಂಬಾಕೆಯನ್ನು ಬೆಳ್ತಂಗಡಿ ಒಡಿಲ್ನಾಳ ನಿವಾಸಿ, ಆಕೆಯ ದೂರದ ಸಂಬಂಧಿ ಚೇತನ್ ಎಂಬಾತ ತಲವಾರಿನಿಂದ ಕಡಿದು ಹತ್ಯೆ ಮಾಡಿದ್ದ.ಶುಕ್ರವಾರ ಬೆಳಗ್ಗೆ ಆರೋಪಿ ಚೇತನ್ ನನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಆದರೆ ಈ ವೇಳೆ ಆರೋಪಿ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್ ಪಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಒನ್ ಸೈಡ್ ಲವ್

ಯುವತಿಯ ದೂರದ ಸಂಬಂಧಿಯಾಗಿದ್ದ ಆರೋಪಿ ಚೇತನ್ (22) ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವು ಮೈರ ನಿವಾಸಿ ಕೃಷಿಕ ಬಾಳಪ್ಪ ಗೌಡ ಅವರಿಗೆ ಮೂವರು ಪುತ್ರಿಯರು. ಅವರಲ್ಲಿ ಲಾವಣ್ಯಾ ಕೊನೆಯವರು. 8 ತಿಂಗಳಿನಿಂದ ಆಕೆ ಕಲ್ಲಡ್ಕ ಸಮೀಪದಲ್ಲಿ ನರ್ಸಿಂಗ್ ಕೆಲಸಕ್ಕೆ ತೆರಳುತ್ತಿದ್ದರು.ಗುರುವಾರ ಸಂಜೆ ಕೆಲಸದಿಂದ ಆಗಮಿಸಿದ ಯುವತಿ ಕಕ್ಯಪದವು ಕಡೆಗೆ ತೆರಳಲು ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಕುಳಿತಿದ್ದರು. ಈ ವೇಳೆ ಆರೋಪಿ ಅಲ್ಲಿಗೆ ಬಂದಿದ್ದಾನೆ. ಆತಂಕಗೊಂಡ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಳು. ಯುವಕ ಬೆನ್ನಟ್ಟಿ ಭೀಕರವಾಗಿ ಕತ್ತಿಯಿಂದ ಕಡಿದಿದ್ದಾನೆ. ತಡೆಯಲು ಬಂದವರನ್ನು ಬೆದರಿಸಿದ್ದಾನೆ. ಕೃತ್ಯ ನಡೆಸಿದ ಬಳಿಕ ಆತ ಅಲ್ಲಿಂದ ಪರಾರಿಯಾಗಿದ್ದ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!