ದೇವೇಗೌಡರ ಪತ್ನಿ ಚೆನ್ನಮ್ಮರ ಆರೋಗ್ಯದಲ್ಲಿ ಒಂದಿಷ್ಟು ಸುಧಾರಣೆ: ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಸತ್ಯನಾರಾಯಣ

Picture of Savistara

Savistara

Bureau Report

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡಅವರ ಪತ್ನಿ ಚೆನ್ನಮ್ಮರ ಆರೋಗ್ಯದಲ್ಲಿ ಒಂದಿಷ್ಟು ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯ ಡಾ.ಸತ್ಯನಾರಾಯಣ ತಿಳಿಸಿದ್ದಾರೆ.ಶನಿವಾರ ಬೆಳಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಡಾ. ಸತ್ಯನಾರಾಯಣ, ಚೆನ್ನಮ್ಮರಿಗೆ ಶುಕ್ರವಾರ ರಾತ್ರಿ ಉಸಿರಾಟದ ಸಮಸ್ಯೆ ಒಂದಿಷ್ಟು ತೀವ್ರವಾಗಿತ್ತು. ಆದರೆ ಶುಕ್ರವಾರಕ್ಕಿಂತ ಶನಿವಾರ ಬೆಳಗ್ಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.ಸದ್ಯ ಉಸಿರಾಟದ ತೊಂದರೆ ಶೇ.20ರಿಂದ 30ರಷ್ಟು ಹತೋಟಿಗೆ ಬಂದಿದೆ. ರಕ್ತದೊತ್ತಡ ಸೇರಿದಂತೆ ಇತರ ಆರೋಗ್ಯದ ಮಾನದಂಡಗಳು ಸ್ಥಿರವಾಗಿವೆ ಎಂದು ವೈದ್ಯರು ಹೇಳಿದ್ದಾರೆ.ಅವರ ಸಂಪೂರ್ಣ ಚೇತರಿಕೆಗೆ ಇನ್ನೂ ಸಮಯ ಬೇಕಾಗಲಿದ್ದು, ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.ಆರೋಗ್ಯದಲ್ಲಿ ದಿಢೀ‌ರ್ ಏರುಪೇರು ಕಾಣಿಸಿಕೊಂಡಿದ್ದರಿಂದ ಚೆನ್ನಮ್ಮರನ್ನು ಮೂರು ದಿನಗಳ ಹಿಂದೆ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!