ಜಾಗತಿಕ ವಿಕಿಮೇನಿಯಾ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಪೆರ್ಲಂಪಾಡಿಯ ಭರತೇಶ ಅಲಸಂಡೆಮಜಲು ಆಯ್ಕೆ

Picture of Savistara

Savistara

Bureau Report

ಪುತ್ತೂರು:ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಪಿಎಚ್‌ ಡಿ ಸಂಶೋಧಕ ವಿದ್ಯಾರ್ಥಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಪೆರ್ಲಂಪಾಡಿಯ ಭರತೇಶ ಅಲಸಂಡೆಮಜಲು ಅವರು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಜು.20ರಿಂದ 26ರವರೆಗೆ ನಡೆಯಲಿರುವ ಜಾಗತಿಕ ಮಟ್ಟದ ‘ವಿಕಿಮೇನಿಯಾ 2026’ ಅಂತರರಾಷ್ಟ್ರೀಯಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ. ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪಿನ ಸಕ್ರಿಯ ಸದಸ್ಯರಾದ ರಾದ ಇವರು ತುಳು

ಮತ್ತು ಕನ್ನಡ ಭಾಷೆಯ ರಾಯಭಾರಿಯಾಗಿ ಈ ಜಾಗತಿಕ ಸಮ್ಮೇಳನವನ್ನು ಪ್ರತಿನಿಧಿಸಲಿದ್ದಾರೆ. ಪ್ರಪಂಚದಾದ್ಯಂತದ ನೂರಾರು ಮುಕ್ತ ಜ್ಞಾನ ಪ್ರಸಾರಕರು ಮತ್ತು ಸ್ವಯಂಸೇವಕರು ಭಾಗವಹಿಸುವ ಈ ಸಮ್ಮೇಳನದಲ್ಲಿ ಇವರು’ ಡಿಜಿಟಲ್ ಸಮಾನತೆ, ಸ್ಥಳೀಯ ತಂತ್ರಜ್ಞಾನದ ಅಳವಡಿಕೆ ಹಾಗೂ ಜಾಗತಿಕ ದಕ್ಷಿಣದ (ಗ್ಲೋಬಲ್ ಸೌತ್) ಪ್ರಾದೇಶಿಕ ಭಾಷೆಗಳ ಸವಾಲುಗಳು ಮತ್ತು ಜೀವಂತ ಪರಂಪರೆಯ ದಾಖಲೀಕರಣದ ಬಗೆಗಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.ತುಳು ವಿಕಿಪೀಡಿಯಾದ ದಶಮಾನೋತ್ಸವ ಯೋಜನೆಗಳಲ್ಲೂ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ ಅರೆಭಾಷೆ ಅಕಾಡೆಮಿಯ ಸದಸ್ಯನಾಗಿದ್ದ ಸಂದರ್ಭದಲ್ಲಿ ಮಹತ್ವದ ಕೊಡುಗೆ ನೀಡಿರುವ ಭರತೇಶ ಅವರು, ಅರೆಭಾಷೆಯ ಇತಿಹಾಸದಲ್ಲೇ ಮೈಲಿಗಲ್ಲಾದ ಮೊದಲ ‘ಅರೆಭಾಷೆ ವಿಶ್ವಕೋಶ’ ದ ಮುಖ್ಯ ಸಂಪಾದಕರಾಗಿ ಹಾಗೂ 18,000 ಪದಗಳನ್ನೊಳಗೊಂಡ ಬೃಹತ್ ‘ಅರೆಭಾಷೆ ನಿಘಂಟು’ವಿನ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪುತ್ತೂರು ವಲಯದ ಬ್ಯಾಂಕ್ ಆಫ್ ಬರೋಡಾದ ಕಾವು ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪೆರ್ಲಂಪಾಡಿಯ ಅಲಸಂಡೆಮಜಲು ಮನೆ ಬೋಜಪ್ಪ ಗೌಡ ಎ ಹಾಗೂ ಗಿರಿಜಾ ಎ ಬಿ. ದಂಪತಿಯ ಪುತ್ರ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!