ಗೃಹಲಕ್ಷ್ಮಿ’ಗೆ ಹೊಸ ನಿಯಮ: ₹2,000 ಪಡೆಯಲು ಬಯೋಮೆಟ್ರಿಕ್ ಅಥವಾ ಮುಖಚಹರೆ ದೃಢೀಕರಣ ಕಡ್ಡಾಯ..!

Picture of Savistara

Savistara

Bureau Report

ಬೆಂಗಳೂರು, ಜು.19: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ’ ಯೋಜನೆಯ ಬೆನ್ನಲ್ಲೇ, ಇದೀಗ ಮತ್ತೊಂದು ಜನಪ್ರಿಯ ಯೋಜನೆಯಾದ ‘ಗೃಹಲಕ್ಷ್ಮಿ’ಗೆ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮಾಸಿಕ 2 ಸಾವಿರ ರೂಪಾಯಿಗಳನ್ನು ಪಡೆಯುತ್ತಿರುವ ಫಲಾನುಭವಿಗಳು ಇನ್ನು ಮುಂದೆ ಕಡ್ಡಾಯವಾಗಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಬೇಕಾಗುತ್ತದೆ.

ಸಚಿವ ಸಂಪುಟದ ಪ್ರಮುಖ ನಿರ್ಧಾರ:ರವಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಯೋಜನೆಯಲ್ಲಿ ಪಾರದರ್ಶಕತೆ ತರಲು ಮತ್ತು ಅರ್ಹ ಫಲಾನುಭವಿಗಳನ್ನು ಮರುಪರಿಶೀಲನೆಗೆ ಒಳಪಡಿಸಲು ಸರ್ಕಾರ ನಿರ್ಧರಿಸಿದೆ. ಈ ಪ್ರಕ್ರಿಯೆಗಾಗಿ ಸುಮಾರು 20 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಪರಿಶೀಲನೆ ಏಕೆ?ಸಿಎಜಿ (CAG) ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಯೋಜನೆ ದುರುಪಯೋಗವಾಗುವುದನ್ನು ತಡೆಯಲು ಈ ಕ್ರಮ ಕೈಗೊಂಡಿದೆ. ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸರ್ಕಾರ, “ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ದೂರವಾಣಿ ಸಂಖ್ಯೆ ಸರಿಯಾಗಿರಬೇಕು. ಫಲಾನುಭವಿಗಳ ಬದಲಾಗಿ ಅವರ ಪತಿ ಅಥವಾ ಮಕ್ಕಳ ಖಾತೆ ವಿವರಗಳನ್ನು ನೀಡಲು ಅವಕಾಶವಿಲ್ಲ. ಅರ್ಹ ಮಹಿಳೆಯರಿಗೆ ಮಾತ್ರ ಈ ಹಣ ತಲುಪಬೇಕು ಎಂಬುದು ನಮ್ಮ ಉದ್ದೇಶ” ಎಂದು ಸ್ಪಷ್ಟಪಡಿಸಿದೆ.

ಪ್ರಮುಖ ಅಂಶಗಳು:ದೃಢೀಕರಣ: ಬಯೋಮೆಟ್ರಿಕ್ ಅಥವಾ ಮುಖಚಹರೆ ಗುರುತು ಪತ್ತೆ ಹಚ್ಚುವ ಮೂಲಕ ಮರುಪರಿಶೀಲನೆ ನಡೆಸಲಾಗುವುದು.

ಅರ್ಹತೆ: ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ಮುಂದುವರಿಯಲಿದೆ.

ಯಾರನ್ನೂ ಕೈಬಿಡುವುದಿಲ್ಲ: ನಿಯಮಬದ್ಧವಾಗಿರುವಯಾವುದೇ ಫಲಾನುಭವಿಯನ್ನು ಯೋಜನೆಯಿಂದ ಕೈಬಿಡುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ.

ಸ್ವಯಂಪ್ರೇರಿತ ತ್ಯಾಗ: ಯೋಜನೆಯ ಸೌಲಭ್ಯಬೇಡದವರು ಸ್ವಯಂಪ್ರೇರಿತವಾಗಿ ಹಣವನ್ನು ಬಿಟ್ಟುಕೊಡಲು (Opt out) ಅವಕಾಶ ಕಲ್ಪಿಸಲಾಗಿದೆ.

ಬ್ಯಾಂಕ್ ವಿವರಗಳಲ್ಲಿ ವ್ಯತ್ಯಾಸವಿರುವ ಅಥವಾ ಆಧಾ‌ರ್ ಲಿಂಕ್ ಆಗದ ಪ್ರಕರಣಗಳನ್ನು ಈ ಮೂಲಕ ಸರಿಪಡಿಸಲು ಸರ್ಕಾರ ಮುಂದಾಗಿದೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!