ರಾಜ್ಯ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ₹2186 ಕೋಟಿ ಅನುದಾನ ಬಿಡುಗಡೆ ಮನವಿ

Picture of Savistara

Savistara

Bureau Report

ನವದೆಹಲಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ₹2186 ಕೋಟಿ ಅನುದಾನ ಬಿಡುಗಡೆ ಮಾಡಿಸಬೇಕೆಂದು ಅವರು ಆಗ್ರಹಿಸಿದರು.ರಾಜ್ಯ ಸರ್ಕಾರ ಎಲ್ಲ ನಿಗದಿತ ಷರತ್ತುಗಳನ್ನು ಪಾಲಿಸಿದ್ದರೂ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-2026ನೇ ಆರ್ಥಿಕ ವರ್ಷಕ್ಕೆ ಗ್ರಾ.ಪಂ.ಗಳಿಗೆ ಹಂಚಿಕೆಯಾಗಿದ್ದ ₹2186.20 ಕೋಟಿ ಬಿಡುಗಡೆಯಾಗಿಲ್ಲ.ತಂತ್ರಾಂಶದ ತೊಡಕನ್ನೇ ಕಾರಣವಾಗಿಟ್ಟುಕೊಂಡು ಅನುದಾನ ತಡೆಹಿಡಿಯಲಾಗಿದೆ ಎಂಬ ಅಂಶವನ್ನು ಕೇಂದ್ರ ಸಚಿವರ ಗಮನಕ್ಕೆ ತಂದರು.ಎಲ್ ನಿನೋ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯ ಕೊರತೆಯಾಗಿದ್ದು, ಗ್ರಾಮೀಣಾಭಿವೃದ್ಧಿಗೆ ತೊಡಕಾಗಿರುವು ದಲ್ಲದೆ, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು.ರಾಜ್ಯ ಸರ್ಕಾರ ಅಗತ್ಯ ಪ್ರಮಾಣಪತ್ರ ಗಳನ್ನು ಒದಗಿಸಿರುವುದಲ್ಲದೆ, ಕೇಂದ್ರ ಪಂಚಾಯತ್‌ರಾಜ್‌ ಸಚಿವಾಲಯ ಕೇಳಿದ್ದ ಎಲ್ಲ ಪ್ರಶ್ನೆಗಳಿಗೂ ಪೂರಕವಾಗಿ ಉತ್ತರಿಸಿದೆ. ಆದರೂ ಹಣ ಬಿಡುಗಡೆ ಮಾಡಿಲ್ಲ ಎಂದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!