ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!

Picture of Savistara

Savistara

Bureau Report

ನವದೆಹಲಿ: ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆಸೋರಿಕೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತವಾಗಿ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶಾದ್ಯಂತ ನೀಟ್‌’ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?

ನಮ್ಮ ಯುವಜನತೆಯ ಭವಿಷ್ಯ ಮತ್ತು ಕ್ಷೇಮಾಭಿವೃದ್ಧಿಗಿಂತ ನಮಗೆ ಬೇರೇನೂ ಮುಖ್ಯವಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಅತ್ಯಂತ ವೇಗವಾಗಿ ಮತ್ತು ಕಠಿಣವಾದ ಶಿಕ್ಷೆ ಸಿಗುವಂತೆ ಮಾಡಲು ‘ಫಾಸ್ಟ್-ಟ್ರ್ಯಾಕ್’ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಮ್ಮ ಯುವಕರ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡಲು ಯತ್ನಿಸುವ ಯಾವುದೇ ವ್ಯಕ್ತಿಯನ್ನು ಅಥವಾ ಶಕ್ತಿಯನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!