ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಶೈಕ್ಷಣಿಕ ದಾಖಲೆಗಳ ಪರಿಶೀಲನೆ ವೇಳೆ ಈ ಅಕ್ರಮ ಬಹಿರಂಗವಾಗಿದೆ. ಅನೇಕರು ಮಾನ್ಯತೆ ಇಲ್ಲದ ಅಥವಾ ನಕಲಿ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ಪಿಎಚ್.ಡಿ ಪದವಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಸಂಬಂಧಪಟ್ಟ ದಾಖಲೆಗಳ ಸಮಗ್ರ ಪರಿಶೀಲನೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದ್ದು, ಅಗತ್ಯವಿದ್ದರೆ ಸೇವೆಯಿಂದ ವಜಾ ಸೇರಿದಂತೆ ಕಾನೂನು ಕ್ರಮವೂ ಕೈಗೊಳ್ಳಬಹುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಈ ಘಟನೆ ನಿಜವಾದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದರ ಜೊತೆಗೆ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವಂತದ್ದಾಗಿದೆ. ಮುಂದಿನ ದಿನಗಳಲ್ಲಿ ನೇಮಕಾತಿ ವೇಳೆ ಶೈಕ್ಷಣಿಕ ದಾಖಲೆಗಳ ಡಿಜಿಟಲ್ ಪರಿಶೀಲನೆ ಮತ್ತು ಕಟ್ಟುನಿಟ್ಟಿನ ದೃಢೀಕರಣ ವ್ಯವಸ್ಥೆ ಜಾರಿಗೆ ತರಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉದ್ಯೋಗ ಉಳಿಸಿಕೊಳ್ಳುವ ಉದ್ದೇಶದಿಂದ ಬರೋಬ್ಬರಿ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್.ಡಿ (Ph.D.) ಪ್ರಮಾಣಪತ್ರಗಳನ್ನು ಸಲ್ಲಿಸಿರುವುದು ಕಾಲೇಜು ಮಟ್ಟದ ಸಮಿತಿಯ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ. ಈ ಬೆಳವಣಿಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ನೇಮಕಾತಿ ಹಾಗೂ ದಾಖಲಾತಿ ಪರಿಶೀಲನಾ ಪ್ರಕ್ರಿಯೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ.
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಶೈಕ್ಷಣಿಕ ದಾಖಲೆಗಳ ಪರಿಶೀಲನೆ ವೇಳೆ ಈ ಅಕ್ರಮ ಬಹಿರಂಗವಾಗಿದೆ. ಅನೇಕರು ಮಾನ್ಯತೆ ಇಲ್ಲದ ಅಥವಾ ನಕಲಿ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ಪಿಎಚ್.ಡಿ ಪದವಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಸಂಬಂಧಪಟ್ಟ ದಾಖಲೆಗಳ ಸಮಗ್ರ ಪರಿಶೀಲನೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದ್ದು, ಅಗತ್ಯವಿದ್ದರೆ ಸೇವೆಯಿಂದ ವಜಾ ಸೇರಿದಂತೆ ಕಾನೂನು ಕ್ರಮವೂ ಕೈಗೊಳ್ಳಬಹುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.ಈ ಘಟನೆ ನಿಜವಾದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದರ ಜೊತೆಗೆ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವಂತದ್ದಾಗಿದೆ. ಮುಂದಿನ ದಿನಗಳಲ್ಲಿ ನೇಮಕಾತಿ ವೇಳೆ ಶೈಕ್ಷಣಿಕ ದಾಖಲೆಗಳ ಡಿಜಿಟಲ್ ಪರಿಶೀಲನೆ ಮತ್ತು ಕಟ್ಟುನಿಟ್ಟಿನ ದೃಢೀಕರಣ ವ್ಯವಸ್ಥೆ ಜಾರಿಗೆ ತರಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.










































