NEET ಅಕ್ರಮಕ್ಕೆ ಕೇಂದ್ರದ ದೊಡ್ಡ ನಿರ್ಧಾರ: ಪ್ರಧಾನಿ ಮೋದಿ ಮಹತ್ವದ ಘೋಷಣೆ

Picture of Savistara

Savistara

Bureau Report

ನೀಟ್ ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಕ್ರಮಗಳಿಗೆ ಮುಂದಾಗಿದೆ.ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದ ಮೂಲಕ, ಈ ಕುರಿತು ಕೇಂದ್ರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಕಠಿಣ ಕಾನೂನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಫಾಸ್ಟ್ ಟ್ರ್ಯಾಕ್ ಕೋರ್ಟ್‌ ಸ್ಥಾಪನೆ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ದೆಹಲಿಯಲ್ಲಿ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸಲಾಗಿದೆ. ಈ ನ್ಯಾಯಾಲಯದಲ್ಲಿ ಸಾರ್ವಜನಿಕ ಪರೀಕ್ಷೆಗಳ ಅಕ್ರಮಗಳಿಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಯಲಿದೆ.

ಕಠಿಣ ಶಿಕ್ಷೆಗೆ ಸರ್ಕಾರದ ಸಿದ್ಧತೆ

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಹೊಸ ಪ್ರಸ್ತಾವನೆಗೆ ಸರ್ಕಾರ ಅಂತಿಮ ರೂಪ ನೀಡುತ್ತಿದೆ. ಸಚಿವ ಸಂಪುಟದ ಅನುಮೋದನೆಯ ಬಳಿಕ ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಉದ್ದೇಶವಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ನಮ್ಮ ಆದ್ಯತೆ’

ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷವೂ ವ್ಯರ್ಥವಾಗದಂತೆ ಪರೀಕ್ಷೆಗಳನ್ನು ಮರುನಡೆಸಿ, ಫಲಿತಾಂಶಗಳನ್ನು ಶೀಘ್ರ ಪ್ರಕಟಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಅನುಭವಿಸುವ ನೋವನ್ನು ಸರ್ಕಾರ ಅರ್ಥಮಾಡಿಕೊಂಡಿದ್ದು, ತಪ್ಪಿತಸ್ಥರನ್ನು ಈಗಾಗಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ಪ್ರಮುಖ ಬದಲಾವಣೆ

ಈ ಬೆಳವಣಿಗೆಗಳ ನಡುವೆಯೇ ಕೇಂದ್ರ ಸರ್ಕಾರ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಲ್ಲೂ ಬದಲಾವಣೆ ಮಾಡಿದೆ. ಉನ್ನತ ಶಿಕ್ಷಣ ಮತ್ತು ಶಾಲಾ ಶಿಕ್ಷಣ ಇಲಾಖೆಗಳಿಗೆ ಹೊಸ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ವಿಶ್ವಾಸಾರ್ಹಗೊಳಿಸುವತ್ತ ಸರ್ಕಾರ ಗಮನ ಹರಿಸಿದೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!