ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ರಾಜೀನಾಮೆ ನೀಡಬೇಕು ಎಂಬ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರವು ಶನಿವಾರದವರೆಗೆ ಸಮಯ ಕೇಳಿದೆ ಎಂದು ಸಿಜೆಪಿ ತಿಳಿಸಿದೆ.
ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ದೆಹಲಿಯಲ್ಲಿ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಅವರೊಂದಿಗೆ ಇಂದು ಮಾತುಕತೆ ನಡೆಸಿದರು.ಕೇಂದ್ರ ಸಚಿವರೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿಯ ರಾಂಕಾ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರವು ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಸರ್ಕಾರ ಅವರನ್ನು ಶೀಘ್ರದಲ್ಲೇ ಹುದ್ದೆಯಿಂದ ವಜಾಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ಹೇಳಿದ್ದಾರೆ.ಇನ್ನುಳಿದಂತೆ ನೀಟ್ ಪರೀಕ್ಷಾ ಅಕ್ರಮದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಮತ್ತು ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ಹಾಗೂ ಕಾನೂನು ಪ್ರಕರಣಗಳನ್ನು ಹಿಂಪಡೆಯುವ ನಮ್ಮೆರಡು ಬೇಡಿಕೆಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನ್ ರಾಜೀನಾಮೆಯೇ ತಮ್ಮ ಮುಖ್ಯ ಬೇಡಿಕೆಯಾಗಿದೆ ಎಂದೂ ಸಿಜೆಪಿ ಸ್ಪಷ್ಟಪಡಿಸಿದೆ.25ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು ಮತ್ತು ಇತ್ತೀಚಿನ ಪರೀಕ್ಷಾ ಅಕ್ರಮಗಳಿಂದ ಬಾಧಿತರಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಷರತ್ತುಗಳಿಗೆ ಸರ್ಕಾರ ಒಪ್ಪಿಕೊಂಡ ನಂತರವಷ್ಟೇ ಸಿಜೆಪಿಯ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಚರ್ಚೆಗೆ ಸಮ್ಮತಿಸಿದ್ದರು.ನೀಟ್ ಪರೀಕ್ಷಾ ಅಕ್ರಮಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷಾ ವ್ಯವಸ್ಥೆಯಲ್ಲಿ ತರಬೇಕಾದ ಸುಧಾರಣೆಗಳ ಕುರಿತು ಕೇಂದ್ರ ಸರ್ಕಾರದಿಂದ ಲಿಖಿತ ಭರವಸೆ ಸಿಕ್ಕ ನಂತರ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಟಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದರು. ಇದರ ಬೆನ್ನಲ್ಲೇ ಈ ಸಭೆ ನಡೆದಿದೆ.ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ವಾಂಗ್ಟಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.
ತ್ವರಿತಗತಿ ನ್ಯಾಯಾಲಯ ಸ್ಥಾಪನೆಗೆ ಮೋದಿ ಸೂಚನೆ
ಗುರುವಾರ ತಡರಾತ್ರಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಡರಾತ್ರಿ ವಿಡಿಯೊ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಕ್ಷಿಪ್ರವಾಗಿ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಿಕೊಳ್ಳಲು ‘ತ್ವರಿತಗತಿ ನ್ಯಾಯಾಲಯ’ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದರು.








































