WEATHER | ಸಿಡಿಲು -ಬಿರುಗಾಳಿ ಸಹಿತ ವರುಣನ ಆರ್ಭಟ: ಜುಲೈ 28 ರವರೆಗೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ !

Picture of Savistara

Savistara

Bureau Report

ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಜುಲೈ 25 ರಿಂದ ಜುಲೈ 28 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಬಿರುಸಿನ ಮಳೆಯಾಗುವ ಸಾಧ್ಯತೆ ಇದ್ದು ಕಟ್ಟೆಚ್ಚರ ವಹಿಸುವಂತೆ ಇಲಾಖೆ ಸಾರ್ವಜನಿಕರಿಗೆ ತಿಳಿಸಿದೆ.ಕರಾವಳಿ ಮತ್ತು ಮಲೆನಾಡಿಗೆಯೆಲ್ಲೋಅಲರ್ಟ್ಮಳೆಯ ಆರ್ಭಟ ಹೆಚ್ಚಾಗಲಿರುವ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿದ್ದು, ಜಿಲ್ಲಾಡಳಿತಗಳು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಜ್ಜಾಗಿವೆ. ಇನ್ನ, ಈ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಜುಲೈ 29 ರಂದು ಬಿಡುವು, 30 ಕ್ಕೆ ಮತ್ತೆ ಆರಂಭ:ಹವಾಮಾನ ವರದಿಗಳ ಪ್ರಕಾರ, ಜುಲೈ 29 ರಂದು ಮಳೆಯ ತೀವ್ರತೆ ಕೊಂಚ ತಗ್ಗಲಿದ್ದು, ರಾಜ್ಯದ ಜನತೆಗೆ ತಾತ್ಕಾಲಿಕ ಬಿಡುವು ಸಿಗಲಿದೆ. ಆದರೆ, ಜುಲೈ 30 ರಿಂದ ಮತ್ತೆ ವರುಣನ ಆರ್ಭಟ ಆರಂಭವಾಗಲಿದ್ದು, ತಿಂಗಳ ಕೊನೆಯವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!