ಮಂಗಳೂರು ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

Picture of Savistara

Savistara

Bureau Report

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ನಡೆದಿದೆ.ವಿಕ್ಕಿ ಬಪ್ಪಲ್ ತಲವಾರು ದಾಳಿಗೊಳಗಾದ ವ್ಯಕ್ತಿ. ರೌಡಿ ಶೀಟರ್ ಆಗಿರುವ ಈತ, ಮಾದಕವಸ್ತು ಮಾರಾಟದ ಕಾರಣಕ್ಕೆ ಪೊಲೀಸ್‌ ಕಣ್ಣಾವಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ದಾಳಿಯಿಂದ ವಿಕ್ಕಿ ಬಪ್ಪಲ್ ನ ಕುತ್ತಿಗೆಯ ಬಳಿ ಆಳವಾದ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!