ಸಂಸತ್ ಆವರಣದಲ್ಲಿ ಪ್ರಧಾನ್‌ಗೆ ಲಾಠಿ ಏಟಿನ ಲೆಕ್ಕ ಕೇಳಿದ ವಿಪಕ್ಷ ನಾಯಕರು

Picture of Savistara

Savistara

Bureau Report

ನವದೆಹಲಿ: ಬಿಜೆಪಿ ಸಂಸದ ಧರ್ಮೇಂದ್ರ ಪ್ರಧಾನ್‌ ಅವರುಸಂಸತ್ತಿನ ಆವರಣಕ್ಕೆ ಬರುತ್ತಿದ್ದಂತೆ ವಿರೋಧ ಪಕ್ಷಗಳ ನಾಯಕರು, ‘ಲಾಠಿ ಏಟಿಗೆ ಲೆಕ್ಕ ಕೊಡಿ’ ಎಂದು ಘೋಷಣೆ ಕೂಗಿದ್ದಾರೆ.

ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನ್‌ ಅವರು, ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಜುಲೈ 25ರಂದು ರಾಜೀನಾಮೆ ನೀಡಿದ್ದರು. ಆ ಖಾತೆಯ ಹೊಣೆಯನ್ನು ಕರ್ನಾಟಕದ ಧಾರವಾಡ ಸಂಸದ ಪ್ರಲ್ಲಾದ ಜೋಶಿ ಅವರಿಗೆ ವಹಿಸಲಾಗಿದೆ.ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷವು (ಸಿಜೆಪಿ) ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಜೂನ್ 20ರಿಂದ ಪ್ರತಿಭಟನೆ ನಡೆಸಿತ್ತು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಜುಲೈ 20ರಂದು ‘ಸಂಸತ್‌ ಚಲೊ’ ನಡೆಸುವುದಾಗಿ ಹೇಳಿತ್ತು.ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅಶ್ರುವಾಯು ಸಿಡಿಸಿದ್ದರು. ಇದರಿಂದ, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆಯಾಗಿತ್ತು. ನೂರಾರು ವಿದ್ಯಾರ್ಥಿಗಳು ಹಾಗೂ 80ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು.

‘ಸಂಸತ್‌ ಚಲೊ’ ದಿನ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಸಿ ದಾಳಿ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.ಆದರೆ, ಈ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ.ವಿದ್ಯಾರ್ಥಿಗಳ ಮೇಲೆ ಕೈಗೊಂಡ ಕ್ರಮವನ್ನು ಖಂಡಿಸಿ ವಿರೋಧ ಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ನಿವಾಸದ ಹೊರಗೆ ಧರಣಿ ನಡೆಸಿದ್ದರು.’ಪ್ರತಿಭಟನಾಕಾರರ ಮೇಲೆ ಕ್ರೂರವಾಗಿ ಹಲ್ಲೆ ಮಾಡಿರುವುದಕ್ಕೆ ಹೊಣೆಗಾರಿಕೆ ನಿಗದಿಯಾಗಬೇಕು’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಪೆಲೆಟ್ ಗನ್ ಬಳಕೆ ಬಗ್ಗೆಯೂ ಆರೋಪ ಮಾಡಿದ್ದಾರೆ.ಪ್ರಿಯಾಂಕಾ ನೇತೃತ್ವದಲ್ಲಿ ಪ್ರತಿಭಟನೆಪ್ರಧಾನ್‌ ಅವರು ಸಂಸತ್ತಿನ ಆವರಣಕ್ಕೆ ಬರುತ್ತಿದ್ದಂತೆ ವಿರೋಧ ಪಕ್ಷಗಳ ನಾಯಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ‘ಲಾಠಿ ಏಟಿಗೆ ಲೆಕ್ಕ ಕೊಡಿ, ಅಮಿತ್ ಶಾ ಉತ್ತರ ನೀಡಿ’ ಎಂದು ಆಗ್ರಹಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!