ಸಿಜೆಪಿ ಬೆನ್ನಲ್ಲೇ ಇ20 ಪೆಟ್ರೋಲ್ ವಿರೋಧಿ ಅಭಿಯಾನ: ಗಡ್ಕರಿ ರಾಜೀನಾಮೆಗೆ ಆಗ್ರಹ

Picture of Savistara

Savistara

Bureau Report

ನವದೆಹಲಿ: ನೀಟ್ ಸೇರಿದಂತೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಿದ ಯಶಸ್ವಿ ಪ್ರತಿಭಟನೆಯಿಂದ ಪ್ರೇರಿತರಾಗಿ ಈಗ ಇ20 ಜನತಾ ಪಾರ್ಟಿ’ ಎಂಬ ಹೊಸ ಡಿಜಿಟಲ್ ಅಭಿಯಾನ ಹುಟ್ಟಿಕೊಂಡಿದೆ.

ಎಥೆನಾಲ್ ಮಿಶ್ರಿತ ಇಂಧನದ ಬದಲಾಗಿ ಗ್ರಾಹಕರಿಗೆ ಶೇ 100ರಷ್ಟು ಪೆಟ್ರೋಲ್ ಒದಗಿಸಬೇಕು. ಅಲ್ಲದೆ ಈ ನೀತಿಯ ಹೊಣೆ ಹೊತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಾಜೀನಾಮೆ ನೀಡಬೇಕು ಎಂದು ಇ20 ಜನತಾ ಪಾರ್ಟಿ ಒತ್ತಾಯಿಸಿದೆ.ಸಾಮಾಜಿಕ ಜಾಲತಾಣಗಳಲ್ಲಿ ಈ ಅಭಿಯಾನ ಭಾರಿ ಸದ್ದು ಮಾಡುತ್ತಿದ್ದು, ‘ಎಕ್ಸ್’ (ಟ್ವಿಟರ್) ಖಾತೆ ಈಗಾಗಲೇ 50 ಸಾವಿರಕ್ಕೂ ಹೆಚ್ಚು ಬೆಂಬಲಿಗರನ್ನು ಪಡೆದುಕೊಂಡಿದೆ. ಹಾಗೆಯೇ ಇನ್‌ಸ್ಟಾಗ್ರಾಮ್‌ನಲ್ಲಿ 2.7 ಲಕ್ಷ ಅನುಯಾಯಿಗಳನ್ನು ಹೊಂದಿದೆ.

‘ನಾವು ಎಥೆನಾಲ್ ಸಬ್ಸಿಡಿ ಅಥವಾ ಉಚಿತ ಇಂಧನ ಕೇಳುತ್ತಿಲ್ಲ. ಎಥೆನಾಲ್ ಯೋಜನೆಯನ್ನು ರದ್ದುಗೊಳಿಸಿ ಎಂದೂ ಹೇಳುತ್ತಿಲ್ಲ. ಪ್ರತಿಯೊಬ್ಬ ಗ್ರಾಹಕನಿಗೆ ತನಗೆ ಬೇಕಾದ ಇಂಧನ ಆಯ್ಕೆ ಮಾಡಿಕೊಳ್ಳುವ ಮೂಲಭೂತ ಹಕ್ಕಿರಬೇಕು ಎಂಬುದಷ್ಟೇ ನಮ್ಮ ಬೇಡಿಕೆ’ ಎಂದು ಇ20 ಜನತಾ ಪಾರ್ಟಿ ಸ್ಪಷ್ಟಪಡಿಸಿದೆ.

ಈ ಅಭಿಯಾನಕ್ಕೆ ವಾಹನ ಸಾರಿಗೆ ಒಕ್ಕೂಟಗಳಿಂದಲೂ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ದೆಹಲಿ ಟ್ಯಾಕ್ಸಿ ಮತ್ತು ಪ್ರವಾಸಿ ವಾಹನ ಮಾಲೀಕರ ಸಂಘವು 220 ಪೆಟ್ರೋಲ್ ಬಳಕೆಯಿಂದ ಹಳೆಯ ವಾಹನಗಳ ಇಂಜಿನ್ ಹಾನಿಗೊಳಗಾಗುತ್ತಿದೆ ಮತ್ತು ಮೈಲೇಜ್ ಕನಿಷ್ಠ ಶೇ 8ರಿಂದ 15ರಷ್ಟು ಕಡಿಮೆಯಾಗುತ್ತಿದೆ ಎಂದು ಆರೋಪಿಸಿ ಆಗಸ್ಟ್ 4ರಂದು ಸಂಸತ್‌ ಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!