ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ

Picture of Savistara

Savistara

Bureau Report

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ನೀಡಿರುವ ಮುನ್ಸೂಚನೆ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರು ನಗರದಲ್ಲಿ 24 ಗಂಟೆಗಳ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!