ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ನಿರ್ಬಂಧ: ಕ್ಷಮೆಯಾಚಿಸಿದ ಮೆಟಾ

Picture of Savistara

Savistara

Bureau Report

ನವದೆಹಲಿ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ಮೆಟಾ ಸರ್ಕಾರದ ಕ್ಷಮೆಯಾಚಿಸಿದೆ, ತಾಂತ್ರಿಕ ದೋಷದಿಂದಾಗಿ ಈ ವೀಡಿಯೊ ತೆಗೆದುಹಾಕಲಾಗಿದೆ ಎಂದು ಕಂಪನಿ ಹೇಳಿದೆ ಎಂದು ಮೂಲಗಳು ತಿಳಿಸಿವೆ.ತಾಂತ್ರಿಕ ದೋಷದಿಂದಾಗಿ ಫೇಸ್ ಬುಕ್ ನಿಂದ ಪ್ರಧಾನಿ ಮೋದಿ ಅವರ ವಿಡಿಯೋವನ್ನು ತೆಗೆದುಹಾಕಲಾಗಿದ್ದು, ಅದನ್ನು ಮರು ಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರ ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದ ವಿಡಿಯೋವನ್ನು ದಿಢೀರನೆ ತೆಗೆದುಹಾಕಲಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮೆಟಾದ ವಿವರಣೆ ಮತ್ತು ವಿಡಿಯೋವನ್ನು ತೆಗೆದುಹಾಕಲು ಏನು ಕಾರಣ ಎಂಬ ಅಂಶದ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.ಫೇಸ್ ಬುಕ್ ನಿಂದ ವಿಡಿಯೋವನ್ನು ತೆಗೆದುಹಾಕಿರುವ ಕುರಿತು ಮೆಟಾ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಪ್ರತಿನಿಧಿಗಳಿಗೆ ವಿವರಣೆ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!